ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಪ್ರಾಪ್ತ ಬಾಲಕನೊಬ್ಬ ತನ್ನ ಸಹೋದರಿ ಮೇಲೆ ಅತ್ಯಾಚಾರವೆಸಗಿದ್ದು, ಆಕೆ ಈಗ ಗರ್ಭಿಣಿಯಾಗಿರುವ ಘಟನೆ ಸೂರತ್ನಲ್ಲಿ ನಡೆದಿದೆ.
ಆತ 16 ವರ್ಷದವನಾಗಿದ್ದು, ತಂಗಿಗೆ 13 ವರ್ಷ ವಯಸ್ಸು ಎಂದು ತಿಳಿದುಬಂದಿದೆ. ಬಾಲಕಿ ಹೊಟ್ಟೆ ನೋವು ಎಂದು ಹೇಳಿದ ಬಳಿಕ ಆಕೆಯ ತಾಯಿ ಆಕೆಯನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ದಾಗ ಘಟನೆ ಬೆಳಕಿಗೆ ಬಂದಿದೆ. ವೈದ್ಯರು ಆಕೆಗೆ ಮೂರು ತಿಂಗಳಾಗಿರುವುದನ್ನು ದೃಢಪಡಿಸಿದ್ದಾರೆ.
ವಿಚಾರಣೆ ವೇಳೆ ಬಾಲಕಿ ತನ್ನ ತಾಯಿಗೆ ತನ್ನ ಅಣ್ಣ ತನ್ನೊಂದಿಗೆ ಲೈಂಗಿಕ ಸಂಬಂಧ ಹೊಂದುವಂತೆ ಕೇಳಿದ್ದಾಗಿ ತಿಳಿಸಿದ್ದಾಳೆ. ಬಾಲಕಿ ನಿರಾಕರಿಸಿದಾಗ ಆತ ಆಕೆಯ ಮೇಲೆ ಎರಡು ಬಾರಿ ಅತ್ಯಾಚಾರ ಎಸಗಿ, ಪೋಷಕರಿಗೆ ತಿಳಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದ ಎನ್ನುವುದು ತಿಳಿದುಬಂದಿದೆ.