ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿಯ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಿಆರ್‌ಎಸ್ ನಾಯಕಿ ಕೆ. ಕವಿತಾ ಅವರು ಕೋರಿರುವ ಜಾಮೀನು ಅರ್ಜಿಗೆ ಪ್ರತಿಕ್ರಿಯಿಸುವಂತೆ ಇ.ಡಿ ಗೆ ದೆಹಲಿ ಹೈಕೋರ್ಟ್ ನೊಟೀಸ್ ನೀಡಿದೆ.
ಇ.ಡಿ.ಗೆ ಪ್ರತಿಕ್ರಿಯೆ ನೀಡಲು ಕಾಲಾವಕಾಶ ನೀಡಿದ ನ್ಯಾಯಮೂರ್ತಿ ಸ್ವರಣ ಕಾಂತ ಶರ್ಮಾ ಅವರು ಪ್ರಕರಣದ ಮುಂದಿನ ವಿಚಾರಣೆಯನ್ನು ಮೇ.24ಕ್ಕೆ ನಿಗದಿಪಡಿಸಿದರು.
ಮುಂದಿನ ವಾರವೇ ವಿಚಾರಣೆ ನಿಗದಿಪಡಿಸುವಂತೆ ನ್ಯಾಯಾಲಯವನ್ನು ಕೋರಿದ ಕವಿತಾ ಪರ ವಕೀಲರಾದ ವಿಕ್ರಮ್ ಚೌಧರಿ ಅವರು, ಕವಿತಾ ಅವರು ಈ ಹಿಂದೆ ಜಾಮೀನು ಅರ್ಜಿ ಸಲ್ಲಿಸಿದ್ದ ವೇಳೆಯೇ ಇ.ಡಿ ಪ್ರತಿಕ್ರಿಯೆ ದಾಖಲಾಗಿದೆ ಎಂದು ತಿಳಿಸಿದರು. ಆದರೆ ನ್ಯಾಯಾಲಯ ಇದಕ್ಕೆ ಸಮ್ಮತಿಸಲಿಲ್ಲ.
ಮಾ.15ರಂದು ಇ.ಡಿ ಕವಿತಾ ಅವರನ್ನು ಬಂಧಿಸಿತ್ತು. ಈ ಪ್ರಕರಣದಲ್ಲಿ ಕವಿತಾ ಅವರು ಕೋರಿದ್ದ ಜಾಮೀನು ಅರ್ಜಿಯನ್ನು ವಿಚಾರಣಾ ನ್ಯಾಯಾಲಯವು ಮೇ6 ರಂದು ತಿರಸ್ಕರಿಸಿತ್ತು.