ಆಸ್ಟ್ರೇಲಿಯಾದಲ್ಲಿ ಭಾರತೀಯ ವಿದ್ಯಾರ್ಥಿಯೊಬ್ಬನ ಬರ್ಬರ ಹತ್ಯೆ: ಇಬ್ಬರು ಆರೋಪಿಗಳ ಬಂಧನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಆಸ್ಟ್ರೇಲಿಯಾದ ಮೆಲ್ಬೋರ್ನ್‌ನಲ್ಲಿ ಭಾರತೀಯ ವಿದ್ಯಾರ್ಥಿಯೊಬ್ಬನನ್ನು ಇರಿದು ಹತ್ಯೆ ಮಾಡಲಾಗಿದೆ.

ಆಸ್ಟ್ರೇಲಿಯಾದ ನ್ಯೂ ಸೌತ್ ವೇಲ್ಸ್ ನಲ್ಲಿ ನಡೆದ ಈ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹರಿಯಾಣದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಹತ್ಯೆಗೀಡಾದ ಕರ್ನಾಲ್ ಮೂಲದ ವಿದ್ಯಾರ್ಥಿ ಆಸ್ಟ್ರೇಲಿಯಾದಲ್ಲಿ ಎಂಟೆಕ್ ಪದವಿ ಓದುತ್ತಿದ್ದರು.

ವಿಕ್ಟೋರಿಯಾ ಪೊಲೀಸರು ನಡೆಸಿದ ಶೋಧ ಕಾರ್ಯಾಚರಣೆಯ ನಂತರ ಮಂಗಳವಾರ ಬೆಳಿಗ್ಗೆ ಗೌಲ್ಬರ್ನ್‌ನಲ್ಲಿ ಅಭಿಜಿತ್ (26) ಮತ್ತು ರಾಬಿನ್ ಗಾರ್ಟನ್ (27) ಎಂಬ ಇಬ್ಬರನ್ನು ಬಂಧಿಸಲಾಗಿದೆ.

ಕೊಲೆ ಮಾಡಿರುವ ಸಹೋದರರು ಕರ್ನಾಲ್‌ನ ಬಸ್ತಾರಾ ಗ್ರಾಮದ ನಿವಾಸಿಗಳಾಗಿದ್ದು, ನ್ಯಾಯಾಲಯಕ್ಕೆ ವಿಚಾರಣೆಗೆ ಕರೆದೊಯ್ಯಲಾಗಿದೆ. ಬಳಿಕ ಪೊಲೀಸರು ತಮ್ಮ ವಶಕ್ಕೆ ಪಡೆದು ವಿಚಾರಣೆ ನಡೆಸುವ ಸಾಧ್ಯತೆಯಿದೆ ಎನ್ನಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!