ಹೊಸದಿಗಂತ ಡಿಜಿಟಲ್ ಡೆಸ್ಕ್:
ಛಿತ್ತೀಸ್‌ಗಢದ ನಾರಾಯಣಪುರದಲ್ಲಿ ಸ್ಥಳೀಯ ಬಿಜೆಪಿ ಮುಖಂಡನನ್ನು ಗುಂಡಿಕ್ಕಿ ಕೊಲ್ಲಲಾಗಿದೆ.
ನಾರಾಯಣಪುರ ಜಿಲ್ಲಾ ಘಟಕದ ಉಪಾಧ್ಯಕ್ಷ ಸಾಗರ್ ಸಾಹುರನ್ನು ಗುಂಡಿಕ್ಕಿ ಭೀಕರವಾಗಿ ಕೊಲೆ ಮಾಡಲಾಗಿದೆ, ಈ ಕೃತ್ಯದ ಹಿಂದೆ ನಕ್ಸಲರ ಕೈವಾಡ ಇರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.