September 18, 2026
Friday, September 18, 2026
spot_img

ವಿಜಯಪುರದಲ್ಲಿ ನಿವೃತ್ತ ಶಿಕ್ಷಕನ ಬರ್ಬರ ಹ*ತ್ಯೆ: ದುಷ್ಕರ್ಮಿಗಳಿಗಾಗಿ ಪೊಲೀಸರ ಶೋಧ

ಹೊಸದಿಗಂತ ವರದಿ ವಿಜಯಪುರ:

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಚೌಡಿಹಾಳ ರಸ್ತೆಯ ಪೂಜಾರಿ ವಸ್ತಿ ಬಳಿ ನಿವೃತ್ತ ಶಿಕ್ಷಕರೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ.

ಮೃತರನ್ನು ಸಿದ್ದಪ್ಪ ಅಂಜುಟಗಿ (63) ಎಂದು ಗುರುತಿಸಲಾಗಿದೆ. ದುಷ್ಕರ್ಮಿಗಳು ಹತ್ಯೆ ನಡೆಸಿದ ಬಳಿಕ ಸ್ಥಳದಿಂದ ಪರಾರಿಯಾಗಿದ್ದಾರೆ. ಹತ್ಯೆಗೆ ನಿಖರ ಕಾರಣವೇನು ಎಂಬುದು ಸದ್ಯಕ್ಕೆ ತಿಳಿದುಬಂದಿಲ್ಲ.

ವಿಷಯ ತಿಳಿಯುತ್ತಿದ್ದಂತೆ ಇಂಡಿ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಹತ್ಯೆಯ ಹಿಂದಿನ ಕಾರಣ ಹಾಗೂ ಆರೋಪಿಗಳ ಪತ್ತೆಗೆ ತನಿಖೆ ಕೈಗೊಂಡಿದ್ದಾರೆ.

ಇಂಡಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !