Monday, July 4, 2022

Latest Posts

ಬಿಎಸ್ ವೈ ರಾಜೀನಾಮೆ: ಮನನೊಂದ ಅಭಿಮಾನಿ ನೇಣಿಗೆ ಶರಣು

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಬಿ.ಎಸ್.ಯಡಿಯೂರಪ್ಪ ಅವರು  ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಕ್ಕೆ ಅಭಿಮಾನಿಯೊಬ್ಬರು ಮನ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರ ಗ್ರಾಮ ರವಿ (35) ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಬಿಎಸ್ ವೈ ಅಭಿಮಾನಿ.

ಈ ಬಗ್ಗೆ ಬಿ ಎಸ್ ವೈ ಟ್ವೀಟ್ ಮಾಡಿ ರವಿ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ” ನನ್ನ ರಾಜೀನಾಮೆಯಿಂದ ಮನನ್ನೊಂದ ಗುಂಡ್ಲುಪೇಟೆ ತಾ॥ ಬೊಮ್ಮಲಾಪುರದ ರಾಜಪ್ಪ (ರವಿ) ಆತ್ಮಹತ್ಯೆಗೆ ಶರಣಾದ ಸುದ್ದಿ ಅತೀವ ನೋವು ಹಾಗೂ ಬೇಸರ ತರಿಸಿದೆ .ರಾಜಕಾರಣದಲ್ಲಿ ಏರಿಳಿತಗಳು ಸಹಜ, ಇದಕ್ಕಾಗಿ ಪ್ರಾಣಾರ್ಪಣೆ ಮಾಡಿಕೊಳ್ಳಲು ಮುಂದಾಗುವುದು ಸರ್ವಥಾ ಒಪ್ಪಲಾಗದು. ಇದರಿಂದ ಕುಟುಂಬಕ್ಕಾಗುವ ನಷ್ಟ ಯಾರಿಂದಲೂ ಭರಿಸಲಾಗದು” ಎಂದಿದ್ದಾರೆ.

‘ಅಭಿಮಾನ ಅತಿರೇಕಕ್ಕೆ ಹೋಗಬಾರದೆಂದು ಕೈಮುಗಿದು ವಿನಂತಿಸುವೆ. ರವಿ ಕುಟುಂಬದ ನೋವಿನೊಂದಿಗೆ ನಾನಿರುವೆ’ ಎಂದು ಭರವಸೆ ನೀಡಿದ್ದಾರೆ.

ರವಿ ಹೋಟೆಲ್​ನಲ್ಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದರು. ಈತ ಯಡಿಯೂರಪ್ಪನವರ ಅಭಿಮಾನಿಯಾಗಿದ್ದ. ಊರಿನ‌ ಜನ ಯಡಿಯೂರಪ್ಪನವರ ಮೇಲಿಟ್ಟಿರುವ ಅವನ ಅಭಿಮಾನ ನೋಡಿ  ರಾಜಾಹುಲಿ ಎಂದೇ ಕರೆಯುತ್ತಿದ್ದರು. ಬಿ.ಎಸ್.ಯಡಿಯೂರಪ್ಪ ಅವರು ನಿನ್ನೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದು, ಇದರಿಂದ ರವಿ ಮನನೊಂದು ನೇಣಿಗೆ ಶರಣಾಗಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss