ಇಂದಿನಿಂದ ಬಿಜೆಪಿ ಅಭ್ಯರ್ಥಿಗಳ ಪರ ಬಿಎಸ್‌ವೈ ಪ್ರಚಾರ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ರಾಜ್ಯದಲ್ಲಿ ಚುನಾವಣಾ ಕಾವು ರಂಗೇರಿದ್ದು, ಎಲ್ಲೆಡೆ ಪ್ರಚಾರದ ಅಬ್ಬರ ಜೋರಾಗಿ ನಡೆಯುತ್ತಿದೆ.
ಬಿಜೆಪಿ ಅಭ್ಯರ್ಥಿಗಳ ಪರವಾಗಿ ಇಂದಿನಿಂದ ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ಪ್ರಚಾರ ಆರಂಭಿಸಲಿದ್ದಾರೆ.

ಇಂದು ಮಧ್ಯಾಹ್ನ 12 ಗಂಟೆಗೆ ಜಗಳೂರಿನಲ್ಲಿ ಬಿಎಸ್‌ವೈ ರೋಡ್ ಶೋ ನಡೆಯಲಿದ್ದು, ಮಧ್ಯಾಹ್ನ 3 ಗಂಟೆಗೆ ಬಾಡ ಗ್ರಾಮದಲ್ಲಿ ಸಾರ್ವಜನಿಕ ಪ್ರಚಾರ ಸಭೆ ನಡೆಸಲಿದ್ದಾರೆ. ರಾತ್ರಿ ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಾಸ್ತವ್ಯ ಹೂಡಲಿದ್ದಾರೆ.

ನಾಳೆ ಬೆಳಗ್ಗೆ 10.30ಕ್ಕೆ ಅಥಣಿಯಲ್ಲಿ ಸಾರ್ವಜನಿಕ ಪ್ರಚಾರ ಸಭೆ ನಡೆಸಲಿದ್ದಾರೆ. ಮಧ್ಯಾಹ್ನ 1 ಗಂಟೆಗೆ ಕುಡಚಿಯಲ್ಲಿ ಸಾರ್ವಜನಿಕ ಪ್ರಚಾರ ಸಭೆ ನಡೆಸಿ, ಮಧ್ಯಾಹ್ನ 3 ಗಂಟೆಗೆ ಖಾನಾಪುರದಲ್ಲಿ ಸಾರ್ವಜನಿಕ ಪ್ರಚಾರ ಸಭೆ ಮಾಡಲಿದ್ದಾರೆ. ರಾತ್ರಿ ಹುಬ್ಬಳ್ಳಿಯಲ್ಲಿ ವಾಸ್ತವ್ಯ ಹೂಡಲಿದ್ದಾರೆ.

ಏ.27ರ ಬೆಳಗ್ಗೆ 11 ಗಂಟೆಗೆ ಬಸವನಬಾಗೇವಾಡಿಯಲ್ಲಿ, ಮಧ್ಯಾಹ್ನ 12.30ಕ್ಕೆ ಮುದ್ದೇಬಿಹಾಳದಲ್ಲಿ ಸಾರ್ವಜನಿಕ ಪ್ರಚಾರ ಸಭೆ ನಡೆಸಲಿದ್ದಾರೆ. ಮಧ್ಯಾಹ್ನ 3.30ಕ್ಕೆ ಇಂಡಿಯಲ್ಲಿ ಸಾರ್ವಜನಿಕ ಪ್ರಚಾರ ಸಭೆ ನಡೆಸಿ ಗುರುವಾರ ರಾತ್ರಿ ಕಲಬುರಗಿಯಲ್ಲಿ ವಾಸ್ತವ್ಯ ಹೂಡಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!