ಸಿಐಡಿ ವಿಚಾರಣೆಗೆ ಹಾಜರಾದ ಬಿಎಸ್ ಯಡಿಯೂರಪ್ಪ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಪೋಕ್ಸೋ ಪ್ರಕರಣ ಸಂಬಂಧ ಮಾಜಿ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಅವರು ಸೋಮವಾರ ಸಿಐಡಿ ಪೊಲೀಸರ ಎದುರು ವಿಚಾರಣೆಗೆ ಹಾಜರಾಗಿದ್ದಾರೆ.

ವಿಚಾರಣೆಗೆ ತೆರಳುವ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿ, ರಾಜ್ಯದ ಜನತೆ ಈಗಾಗಲೇ ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಬೆಲೆ ಏರಿಕೆಯಿಂದ ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ. ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡುವ ರಾಜ್ಯ ಸರ್ಕಾರದ ನಿರ್ಧಾರ ಅಪರಾಧವಾಗಿದೆ. ರಾಜ್ಯ ಸರ್ಕಾರ ಕೂಡಲೇ ತನ್ನ ನಿರ್ಧಾರವನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದ್ದಾರೆ.

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಸಂತ್ರಸ್ತೆಯ ತಾಯಿ ಮಾರ್ಚ್​ 3 ರಂದು ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ತಮ್ಮ ಮಗಳಿಗೆ ಯಡಿಯೂರಪ್ಪ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಅವರು ದೂರಿನಲ್ಲಿ ಆರೋಪಿಸಿದ್ದರು. ಈ ಬಗ್ಗೆ ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದರು. ಬಳಿಕ ರಾಜ್ಯ ಸರ್ಕಾರವು ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!