ಚಿತ್ರದುರ್ಗದಲ್ಲಿ ಗೋವಿಂದ ಕಾರಜೋಳ ಪರ ಬಿ.ಎಸ್.ಯಡಿಯೂರಪ್ಪ ಮತಯಾಚನೆ

ಹೊಸ ದಿಗಂತ ವರದಿ , ಚಿತ್ರದುರ್ಗ 
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಅವರು  ಶುಕ್ರವಾರ  ಚಿತ್ರದುರ್ಗ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದು, ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಅವರ ಪರವಾಗಿ ಮತ ಯಾಚನೆ ಮಾಡಲಿದ್ದಾರೆ. ಇದೇ ಸಂದರ್ಭದಲ್ಲಿ ನಡೆಯುವ ಬಹಿರಂಗ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಬೆಳಿಗ್ಗೆ ೯.೪೫ಕ್ಕೆ ಜಕ್ಕೂರು ವಿಮಾನ ನಿಲ್ದಾಣದಿಂದ ಹೆಲಿಕ್ಯಾಪ್ಟರ್ ಮೂಲಕ ಹೊರಟು ೧೧.೧೫ಕ್ಕೆ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲ್ಲೂಕಿನ ರಾಂಪುರ ಹೆಲಿಪ್ಯಾಡ್‌ಗೆ ಆಗಮಿಸಲಿದ್ದಾರೆ. ೧೧.೩೦ ರಿಂದ ರಾಂಪುರ ಬಸ್ ನಿಲ್ದಾಣದ ಬಳಿಯಲ್ಲಿ ಹೋಬಳಿ ಮಟ್ಟದ ಬೃಹತ್ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡುವರು. ಬಳಿಕ ಮಧ್ಯಾಹ್ನ ೧.೧೫ಕ್ಕೆ ರಸ್ತೆಯ ಮೂಲಕ ಚಳ್ಳಕೆರೆಗೆ ಆಗಮಿಸಿ ೨ ಗಂಟೆಯಿಂದ ರಾಘವೇಂದ್ರ ಕನ್ವೆನ್ಷನ್ ಹಾಲ್‌ನಲ್ಲಿ ನಡೆಯುವ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡುವರು. ಅಲ್ಲಿಂದ ೩.೫೦ಕ್ಕೆ ಹಿರಿಯೂರಿಗೆ ತೆರಳಿ ಅಲ್ಲಿನ ತಹಾ ಕನ್ವೆನ್ಷನ್ ಹಾಲ್‌ನಲ್ಲಿ ನಡೆಯುವ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿ ಮಾತನಾಡುವರು. ನಂತರ ಅಲ್ಲಿಂದ ಹೆಲಿಕ್ಯಾಪ್ಟರ್ ಮೂಲಕ ಬೆಂಗಳೂರಿಗೆ ತೆರಳಲಿದ್ದಾರೆ.

ಈ ಸಂದರ್ಭದಲ್ಲಿ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ, ಬಿಜೆಪಿ ಜಿಲ್ಲಾಧ್ಯಕ್ಷ ಎ.ಮುರಳಿ, ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್, ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ, ಶಾಸಕ ಎಂ.ಚಂದ್ರಪ್ಪ, ವಿಧಾನ ಪರಿಷತ್ ಸದಸ್ಯರಾದ ವೈ.ಎ.ನಾರಾಯಣಸ್ವಾಮಿ, ಚಿದಾನಂದ ಗೌಡ, ಕೆ.ಎಸ್.ನವೀನ್, ಮಾಜಿ ಶಾಸಕರಾದ ಜಿ.ಎಚ್.ತಿಪ್ಪಾರೆಡ್ಡಿ, ನೇರಲಗುಂಟೆ ತಿಪ್ಪೇಸ್ವಾಮಿ, ಮುಖಂಡರಾದ ಲಿಂಗಮೂರ್ತಿ ಸೇರಿದಂತೆ ಇತರರು ಭಾಗವಹಿಸಲಿದ್ದಾರೆ ಎಂದು ಬಿಜೆಪಿ ವಕ್ತಾರರಾದ ದಗ್ಗೆ ಶಿವಪ್ರಕಾಶ್, ನಾಗರಾಜ್ ಬೇದ್ರೆ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!