ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಜೆಪಿಗೆ ಮಾಜಿ ಶಾಸಕ ಯು.ಬಿ ಬಣಕಾರ್ ರಾಜೀನಾಮೆ ನೀಡಿದ್ದಾರೆ.
ಇದರ ಜೊತೆಗೆ ವೀರಶೈವ ಲಿಂಗಾಯತ ಅಭಿವೃದ್ದಿ ನಿಗಮದ ಅಧ್ಯಕ್ಷ ಸ್ಥಾನ, ಉಗ್ರಾಣ ನಿಗಮ ಅಧ್ಯಕ್ಷ ಸ್ಥಾನಕ್ಕೂ ಯು.ಬಿ ಬಣಕಾರ್ ರಾಜೀನಾಮೆ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಆಪ್ತರಲ್ಲಿ ಒಬ್ಬರಾಗಿ ಯು ಬಿ ಬಣಕಾರ್ ಗುರುತಿಸಿಕೊಂಡಿದ್ದರು. ಇದೀಗ ದಿಢೀರ್ ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ, ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನ ಹಾಗೂ ಉಗ್ರಾಣ ನಿಗಮದ ಅಧ್ಯಕ್ಷ ಸ್ಥಾನಕ್ಕೂ ರಾಜೀನಾಮೆ ನೀಡಿದ್ದಾರೆ.
ಹಿರೇಕೆರೂರು ಕ್ಷೇತ್ರದಿಂದ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಇತ್ತೀಚಿಗೆ ನಡೆದ ಬಿಜೆಪಿ ಜನ ಸಂಕಲ್ಪ ಯಾತ್ರೆಯಲ್ಲಿಯೂ ಭಾಗವಹಿಸಿದ್ದ ಇಂದು ಬಿಜೆಪಿಗೆ ಅವರು ರಾಜೀನಾಮೆ ನೀಡಿದ್ದಾರೆ.