spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, December 4, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಕಾರಣವನ್ನು ತಿಳಿಸಿದ ಬಿ.ಎಸ್.​ ಯಡಿಯೂರಪ್ಪ

- Advertisement -Nitte

ಹೊಸದಿಗಂತ ಆನ್ ಲೈನ್ ಡೆಸ್ಕ್:

ರಾಜ್ಯದಲ್ಲಿ ಸಿಂದಗಿ ಹಾಗೂ ಹಾನಗಲ್​ ಉಪಚುನಾವಣೆ ಅಂಗವಾಗಿ ಬಿರಿಸಿನ ಪ್ರಚಾರ ನಡೆಸುತ್ತಿರುವ ಬಿ.ಎಸ್.​ ಯಡಿಯೂರಪ್ಪ, ಇದೀಗ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿರುವ ವಿಚಾರ ಕುರಿತು ಮಾತನಾಡಿದ್ದಾರೆ.
ಯಡಿಯೂರಪ್ಪರನ್ನು ಬಿಜೆಪಿಯವರು ಹೆದರಿಸಿದ್ದಾರೆ. ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡುವಾಗ ಯಡಿಯೂರಪ್ಪ ಏಕೆ ಮಾತನಾಡಲಿಲ್ಲ ಎಂಬ ಸಿದ್ದರಾಮಯ್ಯ ಪ್ರಶ್ನೆಗೆ ಯಡಿಯೂರಪ್ಪ ಹಾವೇರಿಯಲ್ಲಿ ಉತ್ತರ ನೀಡಿದ್ದಾರೆ.
‘ಸಿಎಂ ಸ್ಥಾನಕ್ಕೆ ನಾನೇ ಸ್ವ ಇಚ್ಛೆಯಿಂದ ರಾಜೀನಾಮೆ ನೀಡಿದ್ದೆ. ರಾಜೀನಾಮೆ ನೀಡುವಂತೆ ನನ್ನನ್ನು ಯಾರೂ ಒತ್ತಾಯಿಸಿರಲಿಲ್ಲ. ನನಗೆ ಅಧಿಕಾರ ಎಂದಿಗೂ ಮುಖ್ಯವಾಗಿರಲಿಲ್ಲ. ಬೇರೆಯವರು ಸಿಎಂ ಆಗಲಿ ಎಂದೇ ನಾನು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದರು.
ಈಗ ಬಸವರಾಜ ಬೊಮ್ಮಾಯಿ ಸಿಎಂ ಸ್ಥಾನದಲ್ಲಿದ್ದಾರೆ. ನನಗೆ ಅಧಿಕಾರ ಇಲ್ಲದಿದ್ದರೂ ಜನರು ಪ್ರೀತಿ, ಬೆಂಬಲ ತೋರಿಸುತ್ತಾರೆ. ನವೆಂಬರ್​ 15ರ ಬಳಿಕ ರಾಜ್ಯ ಪ್ರವಾಸ ಕೈಗೊಳ್ಳಲಿದ್ದೇನೆ. ಬಿಜೆಪಿ ಸ್ವಂತ ಬಲದಿಂದ ಅಧಿಕಾರ ಹಿಡಿಯುವಂತೆ ಮಾಡುವುದೇ ನನ್ನ ಸಂಕಲ್ಪ ಎಂದು ಹೇಳಿದರು.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss