ಹೊಸದಿಗಂತ ಡಿಜಿಟಲ್ ಡೆಸ್ಕ್:
ನರೇಂದ್ರ ಮೋದಿ ಅವರ ಪ್ರಮಾಣವಚನ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಆಹ್ವಾನ ನೀಡಲಾಗಿದೆ.
ಈ ಹಿನ್ನೆಲೆಯಲ್ಲಿ ಬಿಎಸ್‌ವೈ ಅವರು ಶನಿವಾರ ಮಧ್ಯಾಹ್ನ ದೆಹಲಿಗೆ ತೆರಳಲಿದ್ದಾರೆ. ಕಾರ್ಯಕ್ರಮ ಮುಗಿಸಿ ಭಾನುವಾರದಂದು ದೆಹಲಿಯಲ್ಲಿಯೇ ಉಳಿದುಕೊಳ್ಳಲಿರುವ ಅವರು ಸೋಮವಾರ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ.
ಜೂನ್ 9 ರ ಸಂಜೆ 6 ಗಂಟೆಗೆ ನರೇಂದ್ರ ಮೋದಿಯವರು ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಈ ಕಾರ್ಯಕ್ರಮಕ್ಕೆ ದಕ್ಷಿಣ ಏಷ್ಯಾದ ಉನ್ನತ ನಾಯಕರನ್ನು ಆಹ್ವಾನಿಸಲಾಗಿದೆ ಎನ್ನಲಾಗಿದೆ.