ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
……………………………………………
ಹೊಸ ದಿಗಂತ ವರದಿ, ಶಿವಮೊಗ್ಗ:
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೋಮವಾರ ನಗರದ ಮಧುಕೃಪಕ್ಕೆ ಭೇಟಿ ನೀಡಿ ಕೆಲ ಹೊತ್ತು ಸಮಾಲೋಚನೆ ನಡೆಸಿದರು.
ಈ ವೇಳೆ ಸಂಘದ ಹಿರಿಯ ಸ್ವಯಂಸೇವಕ ಭ.ಮ. ಶ್ರೀಕಂಠ, ದಕ್ಷಿಣ ಪ್ರಾಂತ ಸಹ ಕಾರ್ಯವಾಹ ಪಟ್ಟಾಭಿರಾಮ, ನಗರ ಕಾರ್ಯವಾಹ ಚೇತನ್, ನಗರ ಸಹ ಕಾರ್ಯವಾಹ ಧನಂಜಯ ಮತ್ತಿತರರು ಹಾಜರಿದ್ದರು.
ಬಳಿಕ ಸುದ್ದಿಗಾರರ ಜೊತೆಗೆ ಮಾತನಾಡಿದ ಯಡಿಯೂರಪ್ಪ, ಸಂಘದ ಹಿರಿಯರನ್ನು ಭೇಟಿ ಮಾಡಿ ಚರ್ಚಿಸುವುದು ವಾಡಿಕೆ. ಆದರೆ ಬಹಳ ಸಮಯದಿಂದ ಭೇಟಿ ಮಾಡಲು ಆಗಿರಲಿಲ್ಲ. ಹಾಗಾಗಿ ಈಗ ಬಂದಿದ್ದೇನೆ. ಜಿಲ್ಲೆಯಲ್ಲಿ ಈಗ ಆಗಿರುವ ಹಾಗೂ ಮುಂದೆ ಆಗಬೇಕಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಮಾಲೋಚನೆ ನಡೆಸಲಾಯಿತು ಎಂದರು.
ಇನ್ನೂ ಇಪ್ಪತ್ತರಿಂದ ಮೂವತ್ತು ದಿನಗಳ ಕಾಲ ಎಲ್ಲಿಯೂ ಓಡಾಡುವುದಿಲ್ಲ. ಬಳಿಕ ಪಕ್ಷದ ರಾಜ್ಯಾಧ್ಯಕ್ಷರು, ಪ್ರಮುಖರ ಜೊತೆ ಚರ್ಚಿಸಿ ಪ್ರವಾಸ ಆರಂಭಿಸುತ್ತೇನೆ ಎಂದರು.
ಸಂಸದ ಬಿ.ವೈ.ರಾಘವೇಂದ್ರ ಜೊತೆಗಿದ್ದರು.