ಮೇಘಾಲಯ ಗಡಿಯಲ್ಲಿ ಬಾಂಗ್ಲಾದೇಶದ ಸ್ಮಗ್ಲರ್‌ ಸೆರೆ

ಹೊಸದಿಗಂತ ಡಿಜಿಟಲ್ ಡೆಸ್ಕ್‌
ಮೇಘಾಲಯದ ಪೂರ್ವ ಖಾಸಿ ಹಿಲ್ಸ್ ಜಿಲ್ಲೆಯಲ್ಲಿ ಸರಕುಗಳ ಕಳ್ಳಸಾಗಣೆ ನಡೆಸುತ್ತಿದ್ದ ಬಾಂಗ್ಲಾದೇಶದ ಪ್ರಜೆಯೊಬ್ಬನನ್ನು ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಬಂಧಿಸಿದೆ.
ಬಾಂಗ್ಲಾದೇಶದ ಸಿಲ್ಹೆಟ್ ಪಟ್ಟಣದ ನಿವಾಸಿ ಫಿರೋಜ್‌ ಅಲಿ ಬಂಧಿತ ಸ್ಮಗ್ಲರ್. ‌ಕಳ್ಳಸಾಗಣೆ ಕುರಿತಾಗಿ ಖಚಿತ ಮಾಹಿತಿ ಮೇರೆಗೆ  ಮೇಘಾಲಯದ ಪಿರಿದಿವಾ ಪ್ರದೇಶದ ಅಂತರಾಷ್ಟ್ರೀಯ ಗಡಿಯಲ್ಲಿ ಬಿಎಸ್‌ಎಫ್ ಪಡೆಗಳನ್ನು ನಿಯೋಜಿಸಲಾಗಿತ್ತು. ಬಂಧಿತ ಆರೋಪಿಯಿಂದ 20 ಲಕ್ಷ ರೂಪಾಯಿಗೂ ಹೆಚ್ಚಿನ ಮೌಲ್ಯದ ಔಷಧಗಳು, ಸೌಂದರ್ಯವರ್ಧಕಗಳು ಮತ್ತು ಬಟ್ಟೆ ಸೇರದಂತೆ ಇತರೆ ವಸ್ತುಗಳನ್ನು ವsಕಜದಕೆ ಪಡೆಯಲಾಗಿದೆ ಎಂದು ಬಿಎಸ್‌ಎಫ್ ವಕ್ತಾರರು ತಿಳಿಸಿದ್ದಾರೆ.
ಬಂಧಿತ ವ್ಯಕ್ತಿಯನ್ನು ಸದ್ಯ ಜಿಲ್ಲಾ ಪೊಲೀಸರಿಗೆ ಹಸ್ತಾಂತರಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!