ಚಿನ್ನ ಅಕ್ರಮ ಕಳ್ಳಸಾಗಾಟ: ಬಿಎಸ್‌ಎಫ್‌ ಬಲೆಗೆ ಬಿದ್ದ ಇಬ್ಬರು ಆರೋಪಿಗಳು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಎರಡು ಪ್ರತ್ಯೇಕ ಘಟನೆಗಳಲ್ಲಿ ಅಕ್ರಮ ಚಿನ್ನ ಸಾಗಾಟ ಮಾಡುತ್ತಿದ್ದವರನ್ನು ಬಂಧಿಸಿದೆ. ಸುಮಾರು 6.15 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ, 74 ಚಿನ್ನದ ಬಿಸ್ಕತ್ತುಗಳು ಮತ್ತು ಮೂರು ಚಿನ್ನದ ಬಾರ್‌ಗಳೊಂದಿಗೆ ಇಬ್ಬರು ಭಾರತೀಯ ಕಳ್ಳಸಾಗಣೆದಾರರನ್ನು ಗಡಿಯಲ್ಲಿ ಸಿಕ್ಕಿಬಿದ್ದಿದ್ದಾರೆ.

ವಶಪಡಿಸಿಕೊಂಡ ಚಿನ್ನದ ಒಟ್ಟು ತೂಕ 11.620 ಕೆಜಿ, ಇದರ ಮೌಲ್ಯ ಅಂದಾಜು 6,15,18,152 ರೂಪಾಯಿ. ಕಳ್ಳಸಾಗಣೆದಾರರು ಭದ್ರತಾ ಪಡೆಗಳ ಕಣ್ತಪ್ಪಿಸಿ ಬಾಂಗ್ಲಾದೇಶದಿಂದ ಭಾರತಕ್ಕೆ ಈ ಚಿನ್ನದ ಬಿಸ್ಕೆಟ್‌ಗಳನ್ನು ಸಾಗಿಸಲು ಪ್ರಯತ್ನಿಸುತ್ತಿದ್ದರು ಎಂದು ಬಿಎಸ್‌ಎಫ್ ತಿಳಿಸಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!