RECRUITMENT | ಗಡಿ ಭದ್ರತಾ ಪಡೆಯಲ್ಲಿ 1410 ಕಾನ್‌ಸ್ಟೇಬಲ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಗಡಿ ಭದ್ರತಾ ಪಡೆಯಲ್ಲಿ 1410 ಕಾನ್‌ಸ್ಟೇಬಲ್‌ ಹುದ್ದೆಗಳನ್ನು ಭರ್ತಿ ಮಾಡಲು ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಈ ಹುದ್ದೆಗಳಿಗೆ ಎಸ್‌ಎಸ್‌ಎಲ್‌ಸಿ ಮತ್ತು ಐಟಿಐ ವಿದ್ಯಾರ್ಹತೆಯನ್ನು ಹೊಂದಿರುವ ಮತ್ತು ಮಾರ್ಚ್‌ 1,2023ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 25 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಕಾನ್‌ಸ್ಟೇಬಲ್‌ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 21,700/- ರಿಂದ 69,100/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಗಡಿ ಭದ್ರತಾ ಪಡೆ ನೇಮಕಾತಿಯ ಕಾನ್‌ಸ್ಟೇಬಲ್‌ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ದೈಹಿಕ ಪರೀಕ್ಷೆ, ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು.

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಮಾರ್ಚ್‌ 1,2023ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!