ಹೊಸದಿಗಂತ ಡಿಜಿಟಲ್ ಡೆಸ್ಕ್:
ಸೋಮವಾರ ರಾಜಸ್ಥಾನದ ಶ್ರೀ ಗಂಗಾನಗರದಲ್ಲಿರುವ ಭಾರತ-ಪಾಕಿಸ್ತಾನ ಅಂತಾರಾಷ್ಟ್ರೀಯ ಗಡಿಯ ಬಳಿ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಎರಡು ಹೆರಾಯಿನ್ ಪ್ಯಾಕೆಟ್‌ಗಳನ್ನು ವಶಪಡಿಸಿಕೊಂಡಿದೆ.
ಮೂಲಗಳ ಮಾಹಿತಿಯಂತೆ ಶ್ರೀಕರಣಪುರ ಗಡಿಯಲ್ಲಿರುವ ಮುಕ್ಕನ್ ಗ್ರಾಮದ ಜಮೀನಿನಲ್ಲಿ ಹೆರಾಯಿನ್ ಪ್ಯಾಕೆಟ್‌ಗಳು ಪತ್ತೆಯಾಗಿವೆ.
ಪಾಕ್ ಸ್ಮಗ್ಲರ್‌ಗಳು ಎರಡು ಹೆರಾಯಿನ್ ಪ್ಯಾಕೆಟ್‌ಗಳನ್ನು ಕಳುಹಿಸಿದ್ದಾರೆ ಎಂದು ಬಿಎಸ್‌ಎಫ್‌ಗೆ ಮಾಹಿತಿ ಸಿಕ್ಕಿದ್ದು, ಅದನ್ನು ವಶಪಡಿಸಿಕೊಳ್ಳಲಾಗಿದೆ. ಈ ಕುರಿತು ಹೆಚ್ಚಿನ ತನಿಖೆ ಮುಂದುವರೆದಿದೆ.