Tuesday, March 28, 2023

Latest Posts

ರಾಜಸ್ಥಾನದಲ್ಲಿ ಪಾಕ್ ಡ್ರೋನ್ ಹೊಡೆದುರುಳಿಸಿದ ಬಿಎಸ್‌ಎಫ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರಾಜಸ್ಥಾನದ ಶ್ರೀಗಂಗಾನಗರ ಸೆಕ್ಟರ್‌ನ ಅಂತಾರಾಷ್ಟ್ರೀಯ ಗಡಿಯ ಬಳಿ ಗಡಿ ಭದ್ರತಾ ಪಡೆ (BSF) ಪಾಕಿಸ್ತಾನದ ಡ್ರೋನ್ ಅನ್ನು ಹೊಡೆದುರುಳಿಸಿದೆ.

ಶ್ರೀಗಂಗಾನಗರ ವಲಯದ ಶ್ರೀಕರನ್‌ಪುರದ ಸಾಮಾನ್ಯ ಪ್ರದೇಶದಲ್ಲಿ ರಾಜಸ್ಥಾನ ಪೊಲೀಸರೊಂದಿಗೆ ನಿಕಟ ಸಮನ್ವಯದಲ್ಲಿ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಬಿಎಸ್‌ಎಫ್
ಆರು ಕಿಲೋಗ್ರಾಂಗಳಷ್ಟು ಮಾದಕವಸ್ತುಗಳನ್ನು ವಶಪಡಿಸಿಕೊಂಡಿದೆ.

ಫೆಬ್ರವರಿ 3-4, 2023 ರ ಮಧ್ಯರಾತ್ರಿಯ ಸಮಯದಲ್ಲಿ ಶ್ರೀಗಂಗಾನಗರ ಸೆಕ್ಟರ್‌ನ ಶ್ರೀಕರನ್‌ಪುರದ ಸಾಮಾನ್ಯ ಪ್ರದೇಶದಲ್ಲಿ ಇಂಡೋ-ಪಾಕ್ ಅಂತಾರಾಷ್ಟ್ರೀಯ ಗಡಿಯಲ್ಲಿ ಬಿಎಸ್‌ಎಫ್ ಪಡೆಗಳನ್ನು ನಿಯೋಜಿಸಲಾಯಿತ್ತು. ಪೊಲೀಸರು ಜಂಟಿ ಕಾರ್ಯಾಚರಣೆಯಲ್ಲಿ ಐಬಿಯ ಭಾರತದ ಕಡೆಗೆ ಪ್ರವೇಶಿಸಿದ ಪಾಕ್ ಡ್ರೋನ್ ಅನ್ನು ಹೊಡೆದುರುಳಿಸಿದರು. ಡ್ರೋನ್ ಮೂಲಕ ಮಾದಕ ವಸ್ತುಗಳನ್ನು ಕಳ್ಳಸಾಗಣೆ ಮಾಡುತ್ತಿದ್ದರು ಎಂದು ಬಿಎಸ್‌ಎಫ್ ಹೇಳಿಕೆಯಲ್ಲಿ ತಿಳಿಸಿದೆ.

ಪಂಜಾಬ್‌ನ ಅಮೃತಸರದಲ್ಲಿ ಒಳನುಗ್ಗಿದ ಪಾಕಿಸ್ತಾನದ ಡ್ರೋನ್ ಅನ್ನು ಹೊಡೆದುರುಳಿಸಿದ ಒಂದು ದಿನದ ನಂತರ ಘಟನೆ ನಡೆದಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!