ಹೊಸದಿಗಂತ ಡಿಜಿಟಲ್ ಡೆಸ್ಕ್:
ಎನ್‌ಡಿಎ ಮತ್ತು ಪ್ರತಿಪಕ್ಷಗಳ ಮೈತ್ರಿಕೂಟ ‘ಇಂಡಿಯಾ’ದಿಂದ ಸಂಪೂರ್ಣ ಅಂತರ ಕಾಯ್ದುಕೊಳ್ಳುವುದಾಗಿ ಬಹುಜನ ಸಮಾಜವಾದಿ ಪಕ್ಷದ (ಬಿಎಸ್‌ಪಿ) ನಾಯಕಿ ಮಾಯಾವತಿ ಪುನರುಚ್ಛರಿಸಿದ್ದಾರೆ.
ಇಂದು ಪಕ್ಷದ ಹಿರಿಯ ನಾಯಕರೊಂದಿಗೆ ಸಮಾಲೋಚನೆ ನಡೆಸಿದ ಮಾಯಾವತಿ, ಚುನಾವಣಾ ಕಾರ್ಯತಂತ್ರದ ಬಗ್ಗೆ ಚರ್ಚೆ ನಡೆಸಿದ್ದಾರೆ.
ಸುಳ್ಳು ಸುದ್ದಿ ಮತ್ತು ಪಕ್ಷ ವಿರೋಧಿ ಚಟುವಟಿಕೆಗಳ ಬಗ್ಗೆ ಎಚ್ಚರದಿಂದಿರುವಂತೆ, ಚುನಾವಣೆಗೆ ಸಿದ್ದತೆಗೆ ಈ ವಿಚಾರಗಳು ಧಕ್ಕೆಯಾಗದಂತೆ ನೋಡಿಕೊಳ್ಳುವಂತೆ ಪಕ್ಷದ ಸದಸ್ಯರಿಗೆ ಒತ್ತಾಯಿಸಿದ್ದಾರೆ.
ಎನ್‌ಡಿಎ ಮತ್ತು ಇಂಡಿಯಾ ಮೈತ್ರಿಕೂಟದಿಂದ ಸಂಪೂರ್ಣ ಅಂತರವನ್ನು ಕಾಯ್ದುಕೊಂಡು ಬಿಎಸ್‌ಪಿ ತನ್ನನ್ನು ತಾನು ಬಲಪಡಿಸಿಕೊಳ್ಳುವ ಮೂಲಕ ಚುನಾವಣೆ ಎದುರಿಸಬೇಕು ಎಂದು ಒತ್ತಿ ಹೇಳಿದರು.