Saturday, February 4, 2023

Latest Posts

ಕೊಪ್ಪಳಕ್ಕೆ ಬಿಎಸ್‌ವೈ ಆಗಮನ: ಕಾರ್ಯಕರ್ತರಲ್ಲಿ ಸಂಭ್ರಮ

ಹೊಸದಿಗಂತ ವರದಿ ಕೊಪ್ಪಳ:

ಜಿಲ್ಲಾ ಬಿಜೆಪಿ ಕಾರ್ಯಾಲಯ ಉದ್ಘಾಟನೆಗೆ ಕೊನೆ ಗಳಿಗೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಗಮಿಸುತ್ತಿದ್ದು, ಕಾರ್ಯಕರ್ತರಲ್ಲಿ ಸಂಭ್ರಮ ಹೆಚ್ಚಾಗಿದೆ.
ಇಂದು ಬೆಳಗ್ಗೆ 11.00 ಗಂಟೆಗೆ ಜಿಲ್ಲಾ ಬಿಜೆಪಿ ಕಾರ್ಯಾಲಯ ವನ್ನು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮ ಕ್ಕೆ ಮಾಜಿ ಸಿಎಂ ಬಿ.ಎಸ್.ವೈ ಗೆ ಆಹ್ವಾನ ನೀಡಿಲ್ಲ ಎಂದು ಮಾಧ್ಯಮಗಳಲ್ಲಿ ಸುದ್ದಿ ಬಿತ್ತರಗೊಂಡಿತ್ತು. ಈ ಸುದ್ದಿಗಳು ಸಾಧ್ಯಕ್ಕೆ ದೂರವಾಗಿವೆ ಎಂದು ಸಾಬೀತು ಪಡಿಸಲು ಬಿ.ಎಸ್.ವೈ ಆಗಮಿಸುತ್ತಿದ್ದಾರೆ. ಇದೀಗ ಬೆಂಗಳೂರಿನಿಂದ ತೆರಳಿದ್ದು, ಉದ್ಘಾಟನೆ ಕಾರ್ಯಕ್ರಮ ಕ್ಕೆ ಭಾಗವಹಿಸಲಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿಕ್ರಿಯೆ ನೀಡಿದ ಬಿಎಸ್‌ವೈ, ಜಿಲ್ಲೆಗೆ ಆಗಮಿಸುವುದಾಗಿ ತಿಳಿಸಿದ್ದಾರೆ. ಬಿಎಸ್‌ವೈ ಆಗಮನದಿಂದ ಕಾರ್ಯಕರ್ತರಲ್ಲಿ ಉತ್ಸಾಹ ಹೆಚ್ಚಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!