Saturday, July 2, 2022

Latest Posts

ಸಂದಿಗ್ಧ ಪರಿಸ್ಥಿತಿಯಲ್ಲಿಯೂ ಬಿ.ಎಸ್.ವೈ ಉತ್ತಮ ಕೆಲಸ: ಶಾಸಕ ದತ್ತಾತ್ರೇಯ ಪಾಟೀಲ್

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ವರದಿ, ಕಲಬುರಗಿ:

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಇತ್ತ ಕಲಬುರಗಿಯಲ್ಲಿ ಶಾಸಕ ದತ್ತಾತ್ರೇಯ ಪಾಟೀಲ್ ಪ್ರತಿಕ್ರಿಯೆ ನೀಡಿದ್ದು, ಸಂದಿಗ್ಧ ಪರಿಸ್ಥಿತಿಯಲ್ಲೂ ಸಹ ಮುಖ್ಯಮಂತ್ರಿ ಉತ್ತಮ ಕೆಲಸ ಮಾಡಿದ್ದಾರೆ ಎಂದು ಹೇಳಿದರು.
ನಾನು ಒಂದು ಮಿಟಿಂಗ್ ನಲ್ಲಿ ಇದ್ದಾಗ, ನನಗೆ ರಾಜೀನಾಮೆ ವಿಷಯ ಮಾಧ್ಯಮದ ಮೂಲಕ ತಿಳಿದಿದೆ. ಎರಡು ವರ್ಷದಲ್ಲಿ ಯಡಿಯೂರಪ್ಪ ನವರು ಉತ್ತಮ ಕೆಲಸ ಮಾಡಿದ್ದಾರೆ ಎಂದರು.
ನಮ್ಮ ಪಕ್ಷ ಶಿಸ್ತಿನ ಪಕ್ಷ. ಯಡಿಯೂರಪ್ಪ ನವರು ಕೂಡ ಅನೇಕ ಬಾರಿ ಹೇಳಿದ್ದಾರೆ.ನಾನು ಖುಚಿ೯ಗೆ ಅಂಟಿಕೊಂಡು ಕುಂತಿಲ್ಲಾ ಎಂದು ಅವರು ಉಲ್ಲೇಖಿಸಿದರು.
ಇದೇ ಸಂದರ್ಭದಲ್ಲಿ ಬಿಜೆಪಿ ಇನೋವ೯ ಶಾಸಕ ಬಸವರಾಜ ಮತ್ತಿಮಡು ಮಾತನಾಡಿ, ಯಡಿಯೂರಪ್ಪನವರು ಸಿಎಂ ಇದ್ದಾಗ, ನಮ್ಮ ಭಾಗಕ್ಕೆ ಹೆಚ್ಚಿನ ಅನುದಾನವನ್ನು ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಎನಾಗುತ್ತದೆಯೋ ಕಾದು ನೋಡಣಾ ಎಂದರು. ಅದರಂತೆ ಕೇಂದ್ರದ ನಾಯಕರ ತೀಮಾ೯ನಕ್ಕೆ ನಾವೆಲ್ಲರೂ ಬದ್ದವಾಗಿದ್ದೇವೆ ಎಂದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss