ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭೆ ಚುನಾವಣೆಗೆ ಇನ್ನೇನು ಕೆಲವೇ ತಿಂಗಳು ಬಾಕಿ ಇದ್ದಂತೆ ಇಂದಿನಿಂದ ಮತ್ತೊಮ್ಮೆ ಮೋದಿ 2024 ಗೋಡೆ ಬರಹ ಅಭಿಯಾನ ಆರಂಭವಾಗಿದೆ.
ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮತ್ತೊಮ್ಮೆ ಮೋದಿ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. ಚಾಮರಾಜನಗರ ಕ್ಷೇತ್ರದ ಪಡುವಾರಳ್ಳಿಯಲ್ಲಿ ಮತ್ತೊಮ್ಮೆ ಮೋದಿ ಗೋಡೆ ಬರಹ ದೀಪಕ್ಕೆ ಬಿಎಸ್ವೈ ಬಣ್ಣ ಹಚ್ಚಿ ಚಾಲನೆ ನೀಡಿದ್ದಾರೆ.
ಇನ್ನು ಬಿಜೆಪಿಯಿಂದ ಗ್ರಾಮ ಚಲೋ ಅಭಿಯಾನ ಕೂಡ ಆರಂಭವಾಗಿದ್ದು, ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಚಾಲನೆ ನೀಡಿದ್ದಾರೆ.