ನಾಳೆ ಕುರುಡುಮಲೆ ದೇವಸ್ಥಾನಕ್ಕೆ ಬಿಎಸ್‌ವೈ ಭೇಟಿ: ಬೊಮ್ಮಾಯಿ, ಕಟೀಲ್‌ ಸಾಥ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ, ರಾಜ್ಯ ಬಿಜೆಪಿ ತನ್ನ ಪಕ್ಷದ ಕಾರ್ಯ ಚಟುವಟಿಕೆಯಲ್ಲಿ ಸಕ್ರಿಯವಾಗಿದೆ. ಈ ಹಿನ್ನೆಲೆಯಲ್ಲಿ ನಾಳೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಕುರುಡುಮಲೆ ದೇವಸ್ಥಾನಕ್ಕೆ ಭೇಟಿ ಕೊಟ್ಟು ವಿಸೇಷ ಪೂಜೆ ಸಲ್ಲಿಸಲಿದ್ದಾರೆ.

ನಾಳೆ ಕೋಲಾರದ ಮುಳಬಾಗಿಲು ತಾಲೂಕು ಕುರುಡುಮಲೆ ವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿ, ಯಡಿಯೂರಪ್ಪ ದೇವರ ದರುಶನವನ್ನು ಪಡೆಯಲಿದ್ದಾರೆ. ಬಿಎಸ್‌ವೈಗೆ ಬಸವರಾಜ್ ಬೊಮ್ಮಾಯಿ, ರಾಜ್ಯಾಧ್ಯಕ್ಷ್ಯ ನಳಿನ್ ಕುಮಾರ್ ಕಟೀಲ್, ಗೋವಿಂದ ಕಾರಜೋಳ ಸೇರಿದಂತೆ ಹಲವು ನಾಯಕರು ಸಾಥ್ ನೀಡಲಿದ್ದಾರೆ.

ಪೂಜೆ ಸಲ್ಲಿಕೆ ಬಳಿಕ ನಾಳೆಯೇ ಲೋಕಸಭಾ ಚುನಾವಣಾ ಪ್ರಚಾರಕ್ಕೂ ಚಾಲನೆ ದೊರೆಯಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!