ಹೊಸದಿಗಂತ ಡಿಜಿಟಲ್ ಡೆಸ್ಕ್:
ನವರಾತ್ರಿ ಮತ್ತು ದಸರಾ ಹಬ್ಬದ ಹಿನ್ನೆಲೆಯಲ್ಲಿ ಬಿ.ಎಸ್.ಯಡಿಯೂರಪ್ಪ ಅವರು ಸಾಗರ ತಾಲೂಕಿನ ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ದೇಶದ ಸರ್ವಾಂಗೀಣ ಸಮೃದ್ಧಿ ಮತ್ತು ಅಭಿವೃದ್ಧಿಗಾಗಿ ಚೌಡೇಶ್ವರಿ ದೇವಿಗೆ ಬಿಎಸ್ವೈ ಪ್ರಾರ್ಥಿಸಿದರು. ಇದೇ ವೇಳೆ ಸಿಗಂದೂರಿಗೆ ಸಂಪರ್ಕ ಕಲ್ಪಿಸುವ ಶರಾವತಿ ನದಿಗೆ ನಿರ್ಮಿಸುತ್ತಿರುವ ಸೇತುವೆ ಕಾಮಗಾರಿಗೆ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಸಂಸದ ರಾಘವೇಂದ್ರ ಹಾಗೂ ಸ್ಥಳೀಯ ಮುಖಂಡರು ಬಿಎಸ್ ವೈಗೆ ಸಾಥ್ ನೀಡಿದ್ದಾರೆ.