Sunday, March 26, 2023

Latest Posts

ಶರಣಬಸವೇಶ್ವರ ದೇಗುಲಕ್ಕೆ ಭೇಟಿ ನೀಡಿ ಪೀಠಾಧಿಪತಿಗಳ ಆಶೀರ್ವಾದ ಪಡೆದ ಬಿ ಎಸ್ ವೈ

ಹೊಸದಿಗಂತ ವರದಿ ಕಲಬುರಗಿ :

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಂಗಳವಾರ ಐತಿಹಾಸಿಕ ಶ್ರೀ ಶರಣಬಸವೇಶ್ವರ ದೇಗುಲಕ್ಕೆ ಭೇಟಿ ನೀಡಿ, ಸಂಸ್ಥಾನದ ಪೀಠಾಧಿಪತಿ ಡಾ.ಶರಣಬಸಪ್ಪಾ ಅಪ್ಪಾ ಹಾಗೂ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಚೇರ್ ಪಸ೯ನ್ ಡಾ.ದಾಕ್ಷಾಯಿಣಿ ಅವ್ವಾಜೀ ಅವರ ಆಯುರಾರೋಗ್ಯ ವಿಚಾರಿಸಿ ಮಾತನಾಡಿದರು.

ಬಿಜೆಪಿ ಪಕ್ಷದ ವಿಜಯ ಸಂಕಲ್ಪ ಯಾತ್ರೆಯಲ್ಲಿ ಭಾಗವಹಿಸಲು ಕಲಬುರಗಿ ನಗರಕ್ಕೆ ಆಗಮಿಸಿದ ಯಡಿಯೂರಪ್ಪ ಹಾಗೂ ಶಾಸಕ ಜಗದೀಶ್ ಶೆಟ್ಟರ್ ಅವರೊಂದಿಗೆ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ಸೇರಿದಂತೆ ಹಲವರು ಸಂಸ್ಥಾನಕ್ಕೆ ತೆರಳಿ ಅಪ್ಪಾಜೀ, ಅವ್ವಾಜೀ ಅವರ ದಶ೯ನ ಪಡೆದುಕೊಂಡರು.

ನಂತರ 18ನೇ ಶತಮಾನದ ಸಂತ ಶ್ರೀ ಶರಣಬಸವೇಶ್ವರರ ಸಮಾಧಿಗೆ ವಿಶೇಷ ಪೂಜೆ ಸಲ್ಲಿಸಿ, ಪ್ರಧಾನ ದೇವರಿಗೆ ನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕುಲಸಚಿವ ಡಾ.ಅನಿಲ್ ಬಿಡವೆ, ಡಿನ್ ಡಾ.ಲಕ್ಷ್ಮಿ ಪಾಟೀಲ್, ಡಾ.ಅಲ್ಲಂಪ್ರಭು ದೇಶಮುಖ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!