Friday, July 1, 2022

Latest Posts

ಈಗಲೂ ಅವರೇ, ಮುಂದೆಯೂ ಯಡಿಯೂರಪ್ಪನವರೇ ಸಿಎಂ: ಉಪಮುಖ್ಯಮಂತ್ರಿ ಕಾರಜೋಳ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ವರದಿ, ಬಾಗಲಕೋಟೆ:

ಮುಖ್ಯಮಂತ್ರಿಯಾಗಿ ಬಿ.ಎಸ್.ಯಡಿಯೂರಪ್ಪನವರು ಈಗಲೂ ಅವರೇ ಇರುತ್ತಾರೆ. ಮುಂದೆಯೂ ಅವರೇ ಇರುತ್ತಾರೆ. ಜುಲೈ 25ಕ್ಕೂ ಇರುತ್ತಾರೆ 26ಕ್ಕೂ ಮುಖ್ಯಮಂತ್ರಿಯಾಗಿರುತ್ತಾರೆ ಯಾರೂ ಚಿಂತೆ ಮಾಡುವುದು ಬೇಡ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದರು.
ಶನಿವಾರ ಜಿಲ್ಲೆಯ ಮುಧೋಳ ತಾಲ್ಲೂಕಿನ ಮಿರ್ಜಿ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಆಕ್ಷಾಂಕ್ಷಿ ಕುರಿತು ಪ್ರತಿಕ್ರಿಯೆ ನೀಡುತ್ತಾ ನನಗೆ ಜೀವನದಲ್ಲಿ ಆಸೆ ಇದೆ. ಆದರೆ ದುರಾಸೆ ಇಲ್ಲ ಎನ್ನುವ ಮೂಲಕ ಸಿಎಂ ಖುರ್ಚಿ ಸ್ಥಾನಕ್ಕೆ ಟವಲ್ ಹಾಕಿದವರೆ ಟಾಂಗ್ ನೀಡಿದರು.
ನಾನು ಯಾವುದಕ್ಕೂ ಆಸೆ ಪಟ್ಟವನಲ್ಲ. ನಾನು ಯಾವತ್ತೂ ದೆಹಲಿಗೆ ಹೋಗಲ್ಲ, ಮುಂಬೈಗೂ ಹೋಗುವುದಿಲ್ಲ. ಮುಖ್ಯಮಂತ್ರಿ ಸ್ಥಾನ ನನಗೇನು ಸಂಬಂಧ. ನಾನು ಅದರಾಂವ್ ಅಲ್ಲವೇ ಅಲ್ಲ ಎಂದರು. ಮುರಗೇಶ ನಿರಾಣಿ ಸೇರಿದಂತೆ ಹಲವರು ಮುಖ್ಯಮಂತ್ರಿ ಸ್ಥಾನಕ್ಕೆ ಲಾಭಿ ನಡೆಸುತ್ತಿರುವ ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಕಾರಜೋಳ ಆ ಬಗ್ಗೆ ನನಗೇನು ಗೊತ್ತಿಲ್ಲ ಎಂದು ಹೇಳಿದರು.
ರಾಜ್ಯದಲ್ಲಿ ಸಕರ್ಾರ ಶಕ್ತಿಯುತವಾಗಿದೆ. ನಮ್ಮ ನಾಯಕರಾದ ಯಡಿಯೂರಪ್ಪನವರು ಪ್ರವಾಹ ಮತ್ತು ಕೊರೋನಾ ಮಧ್ಯ ಭಯಂಕರ ಕೆಲಸವನ್ನು ಮಾಡುತ್ತಿದ್ದಾರೆ. ಭಾನುವಾರ ಬೆಳಗಾವಿಗೆ ಮುಖ್ಯಮಂತ್ರಿ ಬರಲಿದ್ದು ಪ್ರವಾಹ ಕುರಿತು ಎಲ್ಲೆಲ್ಲಿ ಅವಶ್ಯಕತೆ ಇದೆಯೋ ಅಲ್ಲಿ ಸ್ಥಳಗಳನ್ನು ಪರಿಶೀಲಿಸಲಿದ್ದಾರೆ. ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಡುವ ವಿಚಾರ ಕುರಿತು ಕೇಂದ್ರ ಸಕರ್ಾರದಿಂದ ಯಾವುದೇ ಸೂಚನೆ ಬಂದಿಲ್ಲ. ಇದೆಲ್ಲಾ ಮಾಧ್ಯಮದಲ್ಲಿ ಮಾತ್ರ ಹರಿದಾಡುತ್ತಿದೆ ಎಂದು ಹೇಳಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss