ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Wednesday, June 16, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಮುಖ್ಯಮಂತ್ರಿಯಾಗಿ ಬಿಎಸ್‌ವೈ ಮುಂದುವರೆಯುತ್ತಾರೆ, ಯಾವುದೇ ಸಂಶಯ ಬೇಡ : ಸಚಿವೆ ಶಶಿಕಲಾ ಜೊಲ್ಲೆ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸ ದಿಗಂತ ವರದಿ, ಗದಗ:

ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ರಾಜೀನಾಮೆ ಕುರಿತು ಯಾವುದೇ ರೀತಿಯ ಉಹಾಪೋಹಗಳಿಗೆ ನಾವು ಬಲಿ ಆಗುವುದು ಬೇಡ ಎಂದು ಸಚಿವೆ ಶಶಿಕಲಾ ಜೊಲ್ಲೆ ಪ್ರತಿಕ್ರಿಯೆ ನೀಡಿದರು.
ಅವರು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಬಿ. ಎಸ್. ಯಡಿಯೂರಪ್ಪನವರ ನೇತೃತ್ವದ ಸರ್ಕಾರ ಬಂದ ಮೇಲೆ ಬಹಳ ಸಂಕಷ್ಟಗಳನ್ನು ಎದುರಿಸಿದ್ದಾರೆ. ಅತೀವೃಷ್ಟಿ, ಅನಾವೃಷ್ಟಿ, ಕೋವಿಡ್ ಕಾಲದಲ್ಲಿ ಒಳ್ಳೆಯ ಕೆಲಸ ಮಾಡಿರುವದರಿಂದ ಅವರೆ ಮುಂದುವರೆಯುತ್ತಾರೆ, ಅವರ ನೇತೃತ್ವದಲ್ಲಿ ಮುಂದಿನ ಚುನಾವಣೆಗೆ ಹೋಗುತ್ತೇವೆ. ಮನೆಯಲ್ಲಿ ಕೆಲವು ಜಗಳಗಳು ಇರುತ್ತವೆ, ಸ್ವಲ್ಪ ಕಿರಿಕಿರಿ ಇರುತ್ತೇ, ನಂತರ ಬಗೆ ಹರಿಯುತ್ತವೆ. ಯಾರೋ ಏನು ಹೇಳಿದರು ಎಂದು ಗಾಬರಿ ಪಡಬೇಕಾಗಿಲ್ಲ. ನಾನು ಯಾವುದಕ್ಕೂ ಸಹಿ ಮಾಡಿಲ್ಲ, ಸಹಿ ಸಂಗ್ರಹಣೆ ನಡೆಯುತ್ತಿರುವ ಕುರಿತು ಮಾಹಿತಿ ಇಲ್ಲ. ಎಲ್ಲದಕ್ಕೂ ಹೈಕಮಾಂಡ್ ಇರುತ್ತದೆ ಅವರು ಎಲ್ಲದನ್ನು ನೋಡುತ್ತಿರುತ್ತಾರೆ. ಕೋವಿಡ್ ಸಂದರ್ಭದಲ್ಲಿ ಸಿಎಂ ಅವರಿಗೆ ಬೇಜಾರ ಆಗಿರಬಹುದು. ಹಾಗಾಗಿ ರಾಜೀನಾಮೆ ನೀಡಲು ಸಿದ್ದ ಎಂದು ಹೇಳಿದ್ದಾರೆ ಎಂದು ಹೇಳಿದ ಅವರು ಸರ್ಕಾರಿ ಆಸ್ಪತ್ರೆಯಲ್ಲಿ ಮಕ್ಕಳ ತಜ್ಞರ ಕೊರತೆಯಿದೆ, ಖಾಸಗಿ ವೈದ್ಯರ ಜೊತೆಗೆ ಚರ್ಚೆ ಮಾಡುತ್ತಿದ್ದೇವೆ. ಮೂರನೇಯ ಅಲೆಯಲ್ಲಿ ಮಕ್ಕಳಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗುವದು ಎಂದ ಸಚಿವೆ ಶಶಿಕಲಾ ಜೋಲ್ಲೆ ಅವರು ಹೇಳಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss