ಮೇ 12 ರಂದು ಬುದ್ಧ ಪೂರ್ಣಿಮ: ಮಾಂಸ ಮಾರಾಟ ನಿಷೇಧಿಸಿ ಬಿಬಿಎಂಪಿ ಆದೇಶ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಮೇ 12 ರಂದು ಬುದ್ಧ ಪೂರ್ಣಿಮ ಪ್ರಯುಕ್ತ ಪ್ರಾಣಿವಧೆ ಹಾಗೂ ಮಾಂಸ ಮಾರಾಟ ನಿಷೇಧ ಮಾಡಿ ಬಿಬಿಎಂಪಿ ವತಿಯಿಂದ ಆದೇಶ ಹೊರಡಿಸಲಾಗಿದೆ.

ಸೋಮವಾರದಂದು ಬುದ್ಧ ಪೂರ್ಣಿಮ ಆಚರಣೆ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಬಿಬಿಎಂಪಿ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಬಿಬಿಎಂಪಿ ಪಶುಪಾಲನೆ ವಿಭಾಗದ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

ನಾಳೆ ಭಾನುವಾರ ಎಂದಿನಂತೆ ಕಾರ್ಯನಿರ್ಹಿಸಲಿದೆ. ಜೊತೆಗೆ ಸೋಮವಾರ ಬುದ್ಧ ಪೂರ್ಣಿಮೆ ದಿನವನ್ನು ಹೊರತುಪಡಿಸಿ ಮರುದಿನ ಅಂದರೆ ಮಂಗಳವಾರದಿಂದ ಎಂದಿನಂತೆ ಪಾಲಿಕೆ ವ್ಯಾಪ್ತಿಯಲ್ಲಿರುವ ಕಸಾಯಿ ಖಾನೆಗಳು ಕಾರ್ಯ ನಿರ್ವಹಿಸಲಿವೆ ಎಂದು ಪಾಲಿಕೆ ಅಧಿಕಾರಿ ತಿಳಿಸಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!