ಹೊಸದಿಗಂತ ಡಿಜಿಟಲ್ ಡೆಸ್ಕ್:
ಅರಣ್ಯದಂಚಿನಲ್ಲಿ ವಾಸಿಸುವ ಜನಾಂಗದವರಿಗೆ ನೇರ ನೇಮಕಾತಿ ಭಾಗ್ಯ ದೊರಕಿದೆ. 13 ಬುಡಕಟ್ಟು ಜನಾಂಗಗಳಾದ ಜೇನು ಕುರುಬ, ಇರುಳಿಗ, ಕೊರಗ, ಸೋಲಿಗ, ಯರವ, ಪಣಿಯನ್, ಹಲಸರು, ಗೌಡಲು, ಸಿದ್ಧಿ, ಬೆಟ್ಟಕುರುಬ, ಕಾಡುಕುರುಬ, ಕುಡಿಯ ಮತ್ತು ಮಲೆಕುಡಿಯ ಜನಾಂಗಗಳಿಗೆ ರಾಜ್ಯ ಸಿವಿಲ್ ಸೇವೆಗಳಲ್ಲಿ ಪ್ರಾತಿನಿಧ್ಯ ನೀಡುವ ಸಲುವಾಗಿ ವಿಶೇಷ ನೇರ ನೇಮಕಾತಿಯನ್ನು ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ಘೋಷಿಸಿದ್ದಾರೆ.