ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ 7 ನೂತನ ವಿಶ್ವವಿದ್ಯಾಲಯಗಳ ಸ್ಥಾಪನೆ ಮಾಡಲಾಗುವುದು ಎಂದು ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.
ಚಾಮರಾಜನಗರ, ಬೀದರ್, ಹಾವೇರಿ, ಹಾಸನ, ಕೊಡಗು, ಕೊಪ್ಪಳ ಮತ್ತು ಬಾಗಲಕೋಟೆಯಲ್ಲಿ ಹೊಸದಾಗಿ ಏಳು ವಿಶ್ವವಿದ್ಯಾಲಯಗಳ ಸ್ಥಾಪನೆ ಮಾಡಲಾಗುವುದು ಎಂದು ಘೋಷಣೆ ಮಾಡಲಾಗಿದೆ. ಐಐಟಿ ಮಾದರಿಯಲ್ಲಿ ರಾಜ್ಯದಲ್ಲಿ ಕೆಐಟಿ ಸ್ಥಾಪನೆ ಮಾಡಲಾಗುತ್ತದೆ.
ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆಯಲು ಉಚಿತ ಆನ್ಲೈನ್ ಕೋಚಿಂಗ್ ಯೋಜನೆಯನ್ನು ಜಾರಿಗೆ ತರುವ ಬಗ್ಗೆ ಮಖ್ಯಮಂತ್ರಿಗಳು ಘೋಷಿಸಿದ್ದಾರೆ. ಪ್ರತಿಷ್ಠಿತ ವಿದೇಶಿ ವಿವಿಗಳೊಂದಿಗೆ ಒಪ್ಪಂದ ಮಾಡಿಕೊಂಡು ರಾಜ್ಯದ ಏಳು ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳ ಉನ್ನತೀಕರಣಕ್ಕೂ ಸಹ ನಿರ್ಧರಿಸಲಾಗಿದೆ.