ಮಾರ್ಚ್ 4 ಮಧ್ಯಾಹ್ನ 12.30ಕ್ಕೆ ರಾಜ್ಯ ಬಜೆಟ್ ಮಂಡನೆ!

ಹೊಸದಿಗಂತ ಡಿಜಿಟಲ್ ಡೆಸ್ಕ್

ಬೆಂಗಳೂರು: ಕರ್ನಾಟಕ ಸರಕಾರದ 2022-23ನೇ ಸಾಲಿನ ಬಜೆಟ್ ಮಾರ್ಚ್ 4 ರಂದು ಮಂಡನೆಯಾಗಲಿದೆ. ಮಧ್ಯಾಹ್ನ 12.30ಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಜೆಟ್ ಮಂಡಿಸಲಿದ್ದಾರೆ.

ಕರ್ನಾಟಕ ವಿಧಾನಸಭೆ ಕಾರ್ಯದರ್ಶಿಯವರು 15ನೇ ವಿಧಾನಸಭೆಯ 12ನೇ ಅಧಿವೇಶನದ ಕಾರ್ಯಕ್ರಮ ಪಟ್ಟಿ ಬಿಡುಗಡೆ ಮಾಡಿದ್ದಾರೆ. ಮಾ. 4ರಿಂದ 30ರವರೆಗೆ ಒಟ್ಟು 19 ದಿನಗಳ ಕಾಲ ಅಧಿವೇಶನ ನಡೆಯಲಿದೆ. ಮೊದಲ ದಿನವೇ 2022-23ನೇ ಸಾಲಿನ ಆಯವ್ಯಯ ಮಂಡನೆಯಾಗಲಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈಗಾಗಲೇ ಬಜೆಟ್ ಪೂರ್ವಭಾವಿ ಸಭೆಗಳನ್ನು ನಡೆಸಿ, ಎಲ್ಲ ತಯಾರಿ ಮಾಡಿಕೊಂಡಿದ್ದಾರೆ. ಎಲ್ಲ ಇಲಾಖೆಗಳ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ.  ಬಸವರಾಜ ಬೊಮ್ಮಾಯಿ ಅವರಿಗೆ ಇದು ಮೊದಲ ಬಜೆಟ್ ಆಗಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!