ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಹುನಿರೀಕ್ಷಿತ ರಾಜ್ಯ ಬಜೆಟ್ ಮಂಡನೆ ಇದೀಗ ಆರಂಭವಾಗಿದೆ. ಸಂಪುಟ ಸಭೆಯ ಅನುಮೋದನೆ ಪಡೆದು ಸಿಎಂ ಬೊಮ್ಮಾಯಿ ಬಜೆಟ್ ಮಂಡನೆ ಆರಂಭಿಸಿದ್ದಾರೆ. ಈ ಸಂದರ್ಭದಲ್ಲಿ ಸಹೋದ್ಯೋಗಿಗಳು ಶುಭಾಶಯ ಕೋರಿದ್ದಾರೆ.
ಕೋವಿಡ್ ನಡುವೆಯೂ ರಾಜ್ಯ ಪ್ರಗತಿಯತ್ತ ಮುನ್ನಡೆಯುತ್ತಿದೆ. ಎಲ್ಲ ಇಲಾಖೆಗಳ ಸಹಾಯದಿಂದ ಕೋವಿಡ್ ನಿಯಂತ್ರಣಕ್ಕೆ ಬಂದಿದೆ. ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರಿಗೆ ಧನ್ಯವಾದ ತಿಳಿಸುತ್ತೇವೆ. ಅವರ ಮಹತ್ವಾಕಾಂಕ್ಷೆಯಿಂದ ಮುನ್ನಡೆಯುತ್ತಿದ್ದೇವೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.