ದ.ಕ. ಮತ್ತು ಚಾಮರಾಜನಗರದಲ್ಲಿ ಮೆನ್ಸ್ಟ್ರುವಲ್ ಕಪ್ ವಿತರಣೆ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್: 
ಬೆಂಗಳೂರು: ವಿದ್ಯಾರ್ಥಿನಿಯರಲ್ಲಿ ಋತುಚಕ್ರ ನೈರ್ಮಲ್ಯ ಕಾಪಾಡಲು
ಸ್ಥಗಿತಗೊಂಡಿದ್ದ ಶುಚಿ ಯೋಜನೆಯನ್ನು ಪುನರಾಂಭಿಸಲಾಗಿದೆ.
ಸುಮಾರು 19 ಲಕ್ಷ ವಿದ್ಯಾರ್ಥಿನಿಯರಿಗೆ ಸ್ಯಾನಿಟರಿ ನ್ಯಾಪ್ಕಿನ್ ವಿತರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ಬಜೆಟ್‌ನಲ್ಲಿ ಘೋಷಣೆ ಮಾಡಿದ್ದಾರೆ.
ಈ ಯೋಜನೆ ಉತ್ತಮ ಪಡಿಸಲು ಮಹಿಳಾ ಸ್ವಸಹಾಯ ಗುಂಪುಗಳಿಗೆ ಕೈಜೋಡಿಸಲಾಗುವುದು ಎಂದು ಹೇಳಿರುವ ಸಿಎಂ, ಮಧ್ಯ ಪ್ರದೇಶ ಮಾದರಿಯಲ್ಲಿ ದಕ್ಷಿಣ ಕನ್ನಡ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಮೆನ್ಸ್ಟ್ರುವಲ್ ಕಪ್ (ಮುಟ್ಟಿನ ಕಪ್) ವಿತರಿಸಲಾಗುವುದು ಎಂದು ಘೋಷಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!