ಬಜೆಟ್‌ 2023 : 157 ಹೊಸ ನರ್ಸಿಂಗ್‌ ಕಾಲೇಜ್, ಐಸಿಎಂಆರ್ ಸೌಲಭ್ಯ ; ಆರೋಗ್ಯ ಕ್ಷೇತ್ರಕ್ಕೆ ಬಲ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಲೋಕಸಭೆಯಲ್ಲಿ ಸಚಿವೆ ನಿರ್ಮಲಾ ಸೀತಾರಾಮನ್ 2023-24 ನೇ ಸಾಲಿನ ಬಜೆಟ್ ಮಂಡನೆ ಭಾಷಣವನ್ನು ಆರಂಭಿಸಿದ್ದು, 157 ಹೊಸ ನರ್ಸಿಂಗ್‌ ಕಾಲೇಜುಗಳನ್ನು ತೆರೆಯುವುದಾಗಿ ಘೋಷಿಸಿದ್ದಾರೆ.

2014ರ ನಂತರ ಆರಂಭವಾಗಿರುವ 157 ವೈದ್ಯಕೀಯ ಕಾಲೇಜುಗಳಲ್ಲಿ 157 ಹೊಸ ನರ್ಸಿಂಗ್‌ ಕಾಲೇಜುಗಳನ್ನು ಆರಂಭಿಸಲಾಗುವುದು ಎಂದು ಹೇಳಿದ್ದಾರೆ.

ಸಿಕಲ್ ಸೆಲ್ ಅನಿಮಿಯಾ ಕಾಯಿಲೆಯನ್ನು 2047ರ ಒಳಗೆ ನಿರ್ಮೂಲನೆ ಮಾಡಲಾಗುವುದು. ಐಸಿಎಂಆರ್ ಲ್ಯಾಬ್​ಗಳನ್ನು ಸಾರ್ವಜನಿಕ ಮತ್ತು ಖಾಸಗಿ ವೈದ್ಯಕೀಯ ಸಂಶೋಧನೆಗೆ ಒದಗಿಸಲಾಗುವುದು. ಔಷಧ ವಿಜ್ಞಾನದಲ್ಲಿ ಸಂಶೋಧನೆಗೆ ಉತ್ತೇಜನ ನೀಡಲು ಹೊಸ ಕಾರ್ಯಕ್ರಮ ರೂಪಿಸಲಾಗುವುದು ಎಂದು ಸಚಿವರು ಘೋಷಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!