Budget 2023 : ಹಳೇ ಸರ್ಕಾರಿ ವಾಹನಗಳ ಬದಲಾವಣೆಗೆ ಕ್ರಮ !

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಲೋಕಸಭೆಯಲ್ಲಿ ಸಚಿವೆ ನಿರ್ಮಲಾ ಸೀತಾರಾಮನ್ 2023-24 ನೇ ಸಾಲಿನ ಬಜೆಟ್ ಮಂಡನೆ ಭಾಷಣವನ್ನು ಮಾಡಲಾಗುತ್ತಿದ್ದು, ಹಳೇ ಸರ್ಕಾರಿ ವಾಹನಗಳ ಬದಲಾವಣೆಗೆ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.

ಹೆಚ್ಚಿನ ಮಾಲಿನ್ಯ ಉಂಟು ಮಾಡುವ ಹಳೇ ಸರ್ಕಾರಿ ವಾಹನಗಳ ಬದಲಾವಣೆಗೆ ಅಗತ್ಯ ಕ್ರಮ ತೆಗೆದುಕೊಳ್ಳುವುದಾಗಿ ಸಚಿವರು ಹೇಳಿದರು. ರಾಜ್ಯ ಸರ್ಕಾರಗಳ ಸುಪರ್ದಿಯಲ್ಲಿರುವ ಹಳೇ ವಾಹನಗಳು ಮತ್ತು ಆಂಬುಲೆನ್ಸ್​ಗಳ ಬದಲಾವಣೆಗೆ ಕೇಂದ್ರ ಸರ್ಕಾರ ನೆರವು ಒದಗಿಸಲಿದೆ ಎಂದು ತಿಳಿಸಿದರು.

ಈ ವೇಳೆ ಸಚಿವರು ಪೊಲ್ಯುಟಿಂಗ್ (Polluting) ಎಂದು ಹೇಳುವ ಬದಲು ಪೊಲಿಟಿಕಲ್ (Political) ಎಂದು ಹೇಳಿದ್ದನ್ನು ಪ್ರತಿಪಕ್ಷಗಳ ಸದಸ್ಯರು ಲೇವಡಿ ಮಾಡಿದರು. ಆದರೆ ಸಚಿವರು ‘ಹಳೇ ಮಾಲಿನ್ಯಕಾರಕಗಳನ್ನು ಬದಲಿಸಬೇಕು, ನಾನು ಹೇಳಿದ್ದು ಸರಿತಾನೆ’ ಎಂದು ತಿರುಗೇಟು ನೀಡಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!