ಹೊಸದಿಗಂತ ಡಿಜಿಟಲ್ ಡೆಸ್ಕ್ :
ಲೋಕಸಭೆಯಲ್ಲಿ ಸಚಿವೆ ನಿರ್ಮಲಾ ಸೀತಾರಾಮನ್ 2023-24 ನೇ ಸಾಲಿನ ಬಜೆಟ್ ಮಂಡನೆ ಭಾಷಣವನ್ನು ಆರಂಭಿಸಿದ್ದು, ಭಾರತದ ಆರ್ಥಿಕತೆ ಸರಿಯಾದ ಹಾದಿಯಲ್ಲಿದೆ ಎಂದಿದ್ದಾರೆ.
ಅವರ ಭಾಷಣದ ವೇಳೆ ಆಡಳಿತ ಪಕ್ಷದ ಸದಸ್ಯರು ‘ಮೋದಿ ಮೋದಿ’ ಎಂದು ಕೂಗಿದರು. ಇದನ್ನು ವಿರೋಧಿಸಿ ಪ್ರತಿಪಕ್ಷ ಸದಸ್ಯರು ಮತ್ತೊಮ್ಮೆ ‘ಭಾರತ್ ಜೋಡೋ’ ಎಂದು ತಿರುಗೇಟು ನೀಡಿದರು.