ಬಜೆಟ್‌ 2023 : ಸಿರಿಧಾನ್ಯ ಸಂಶೋಧನೆಗೆ ಸರ್ಕಾರದ ಬೆಂಬಲ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಲೋಕಸಭೆಯಲ್ಲಿ ಸಚಿವೆ ನಿರ್ಮಲಾ ಸೀತಾರಾಮನ್ 2023-24 ನೇ ಸಾಲಿನ ಬಜೆಟ್ ಮಂಡನೆ ಭಾಷಣವನ್ನು ಆರಂಭಿಸಿದ್ದು, ಸಿರಿಧಾನ್ಯ ಸಂಶೋಧನೆಗೆ ಸರ್ಕಾರದ ಬೆಂಬಲವಿದೆ ಎಂದು ಹೇಳಿದ್ದಾರೆ.

ರಾಗಿ ಸೇರಿದಂತೆ ಸಿರಿಧಾನ್ಯಗಳ ಬೆಳೆ ಪದ್ಧತಿ ಸುಧಾರಣೆಗಾಗಿ ಸಂಶೋಧನೆ ನಡೆಸಲು ಹಾಗೂ ಉತ್ತಮ ಬೆಳೆ ಪದ್ಧತಿಯ ದಾಖಲಾತಿಗಾಗಿ ‘ನ್ಯಾಷನಲ್ ಇನ್​ಸ್ಟಿಟ್ಯೂಟ್ ಆಫ್ ಮಿಲೆಟ್ ರೀಸರ್ಚ್’ ಸಂಸ್ಥೆಗೆ ಅಗತ್ಯ ನೆರವು ಒದಗಿಸಲಾಗುವುದು. ಈ ಸಂಸ್ಥೆಗೆ ‘ಸೆಂಟರ್ ಆಫ್ ಎಕ್ಸೆಲೆನ್ಸ್’ ಉಪಕ್ರಮದ ಮೂಲಕ ಬೆಂಬಲಿಸಲಾಗುವುದು ಎಂದು ಸಚಿವರು ಘೋಷಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!