ಹೊಸದಿಗಂತ ಡಿಜಿಟಲ್ ಡೆಸ್ಕ್:
‘ಮೋದಿ 3.0’ ಸರ್ಕಾರದ ಮೊದಲ ಕೇಂದ್ರ ಬಜೆಟ್ ಅವರ “ಸಬ್ಕಾ ಸಾಥ್ ಸಬ್ಕಾ ವಿಕಾಸ್” ಮಂತ್ರವನ್ನು ಆಧರಿಸಿದೆ ಎಂದು ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್ ಚೌಧರಿ ಹೇಳಿದ್ದಾರೆ.
ಇಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ 2024-25ನೇ ಸಾಲಿನ ಸಂಪೂರ್ಣ ಬಜೆಟ್ ಮಂಡಿಸಲಿದ್ದಾರೆ. ಈ ಬಜೆಟ್ ಪ್ರಧಾನಿ ಮೋದಿಯವರ ಸಬ್ಕಾ ಸಾಥ್ ಸಬ್ಕಾ ವಿಕಾಸ್ ಮಂತ್ರವನ್ನು ಆಧರಿಸಿದೆ ಎಂದು ಚೌಧರಿ ಹೇಳಿದರು.
ಬಜೆಟ್ ಮಂಡನೆಗೂ ಮುನ್ನ ಹಣಕಾಸು ಸಚಿವಾಲಯದ ನಾರ್ತ್ ಬ್ಲಾಕ್ ಕಚೇರಿಗಳನ್ನು ತಲುಪಿದ ಚೌಧರಿ, ಹಣಕಾಸು ಸೇವೆಗಳ ಇಲಾಖೆಯ ಕಾರ್ಯದರ್ಶಿ ವಿವೇಕ್ ಜೋಶಿ ಮತ್ತು ಮುಖ್ಯ ಆರ್ಥಿಕ ಸಲಹೆಗಾರ ವಿ. ಅನಂತ ನಾಗೇಶ್ವರನ್ ಕೂಡ ಮುಂಚಿತವಾಗಿ ಸಚಿವಾಲಯವನ್ನು ತಲುಪಿದ್ದಾರೆ.