ಹೊಸದಿಗಂತ ಡಿಜಿಟಲ್ ಡೆಸ್ಕ್:
ಬ್ರ್ಯಾಂಡ್ ಬೆಂಗಳೂರು ಯೋಜನೆಯಡಿ, 1,800 ಕೋಟಿ ರೂ. ಮೊತ್ತದ 21 ಯೋಜನೆಗಳಿಗೆ ಸರ್ಕಾರ ಅನುಮೋದನೆ ನೀಡಿದೆ. ಬೆಂಗಳೂರು ನಗರದಲ್ಲಿ ವ್ಯವಸ್ಥಿತ ಒಳಚರಂಡಿ ಜಾಲ ಮತ್ತು ಎಸ್.ಟಿ.ಪಿ ನಿರ್ಮಿಸಲು 3 ಸಾವಿರ ಕೋಟಿ ರೂ. ಆರ್ಥಿಕ ನೆರವು ನೀಡಲು ಮುಂದಾಗಿದೆ.
ಬೆಂಗಳೂರು ಬಿಸ್‌ನೆಸ್ ಕಾರಿಡಾರ್ 73 ಕಿ.ಮೀ ಉದ್ದದ ರಸ್ತೆ ನಿರ್ಮಾಣಕ್ಕೆ 27 ಸಾವಿರ ಕೋಟಿ ರೂ. ಯೋಜನೆಗೆ ಗ್ರೀನ್ ಸಿಗ್ನಲ್ ಸಿಕ್ಕಿದೆ. ಮುಂದಿನ ಎರಡು ವರ್ಷಗಳಲ್ಲಿ ಒಟ್ಟಾರೆ 98.60 ಕಿ.ಮೀ ಹೆಚ್ಚುವರಿ ನಮ್ಮ ಮೆಟ್ರೋ ಜಾಲ ಅಭಿವೃದ್ಧಿ ಎಂದು ಸಿದ್ದರಾಮಯ್ಯ ಘೋಷಿಸಿದ್ದಾರೆ.