ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಸಿದ್ದರಾಮಯ್ಯ ಅವರು ಕೊರತೆ ಬಜೆಟ್ ಮಂಡಿಸಿದ್ದಾರೆ ಎಂದು ಮಾಜಿ ಸಿಎಂ ಬೊಮ್ಮಾಯಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹೇಳಿಕೆ ನೀಡಿದ ಬೊಮ್ಮಾಯಿ , ಯಾವುದೇ ಆಸೆ ನಿರೀಕ್ಷೆಗಳನ್ನು ಈ ಬಜೆಟ್ ಈಡೇರಿಸಿಲ್ಲ. ಬಜೆಟ್ ನಲ್ಲಿ ಇಲಾಖಾವಾರು ಅನುದಾನದಲ್ಲೂ ಕಡಿತ ಮಾಡಲಾಗಿದೆ. ನನ್ನ ಬಜೆಟ್ ನಲ್ಲಿ ಅನುದಾನ ಹೆಚ್ಚಾಗಿತ್ತು ಎಂದು ಬೊಮ್ಮಾಯಿ ಅಸಮಾಧಾನ ವ್ಯಕ್ತ ಪಡಿಸಿದರು.
ಅನುದಾನವನ್ನು ಹೆಚ್ಚಿಸಬೇಕಾಗಿತ್ತು, ಅನುದಾನ ಇಳಿಕೆಯಿಂದ ಅಭಿವೃದ್ಧಿ ಯೋಜನೆ ಕುಂಠಿತವಾಗುತ್ತದೆ. ಅಲ್ಪಸಂಖ್ಯಾತರಿಗೆ ಹೆಚ್ಚು ಅನುದಾನ ನೀಡಿದ್ದಕ್ಕೆ ನಮ್ಮ ವಿರೋಧ ಇಲ್ಲ ಎಂದು ಹೇಳಿದರು.