ಭದ್ರಾ ಮೇಲ್ದಂಡೆ ಯೋಜನೆಗೆ ಬಜೆಟ್ ನಲ್ಲಿ ಅನುದಾನ: ಖುಷಿ ಹಂಚಿಕೊಂಡ ಮುಖ್ಯಮಂತ್ರಿ ಬೊಮ್ಮಾಯಿ

ಹೊಸದಿಗಂತ ವರದಿ, ಹಾವೇರಿ:

ಪ್ರಸಕ್ತ ಸಾಲಿನ ಕೇಂದ್ರದ ಆಯವ್ಯಯದಲ್ಲಿ ರಾಜ್ಯದ ಭದ್ರಾ ಮೇಲ್ದಂಡೆ ಯೋಜನೆಗೆ ೫೩೦೦ ಕೋಟಿರೂ ನೀಡಿರುವುದು ರಾಜ್ಯದ ಜನತೆಗೆ ಹಾಗೂ ನನಗೆ ಹರ್ಷವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಬುಧವಾರ ಜಿಲ್ಲೆಯ ಬ್ಯಾಡಗಿ ತಾಲ್ಲೂಕಿನ ಶಿಡೇನೂರು ಗ್ರಾಮದಲ್ಲಿ ಹೆಲಿಪ್ಯಾಡ್‌ದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ರಾಜ್ಯದ ಪ್ರಮುಖ ನೀರಾವರಿ ಯೋಜನೆ. ಮಧ್ಯ ಕರ್ನಾಟಕದ ಬರಗಾಲ ಪೀಡಿತ, ಬಿಸಿಲು ಪ್ರದೇಶದ ನಾಡಿಗೆ ಒಂದು ಲಕ್ಷಕ್ಕಿಂತ ಹೆಕ್ಟರ್ ಪ್ರದೇಶಕ್ಕೆ ನೀರಾವರಿ, ಕುಡಿಯುವ ನೀರಿನ ಮಹತ್ವದ ಯೋಜನೆ ಇದಾಗಿದ್ದು, ಇದರಿಂದ ಈ ಭಾಗರದ ರೈತರಿಗೆ ಬಹಳ ಪ್ರಯೋಜನವಾಗಲಿದೆ. ರಾಷ್ಟ್ರೀಯ ಯೋಜನೆಯಾಗಿ ಮಾಡುವಂತೆ ಮೊದಲೇ ಪ್ತಸ್ತಾವನೆ ಕಳಿಸಿದ್ದೆವು. ಹೀಗಾಗಿ ಕೇಂದ್ರ ಈ ಬಜೆಟ್‌ನಲ್ಲಿ ೫೩೦೦ ಕೋಟಿ ನೀಡಿದ್ದು ಸ್ವಾಗತಾರ್ಹ ಎಂದರು.

ರಾಜ್ಯದ ಹಲವಾರು ಯೋಜನೆಗಳಲ್ಲಿ ಇದು ಮೊದಲು ರಾಷ್ಟ್ರೀಯ ಯೋಜನೆ. ಈ ಯೋಜನೆಗೆ ಇಷ್ಟು ದೊಡ್ಡ ಪ್ರಮಾಣದ ಅನುನಾದ ಘೋಷಣೆ ಮಾಡಿದ್ದು ಸಂತಸದ ಸಂಗತಿ ಎಂದು ತಿಳಿಸಿದರು.

ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರದಲ್ಲಿ ನಿರ್ಮಿಸಲು ಉದ್ದೇಶಿಸಿದ್ದ ಇಂಡಸ್ಟ್ರಿಯಲ್ ಕಾರಿಡಾರ್‌ಗೆ ಭೂ ಸ್ವಾದೀನಕ್ಕೆ ರೈತರ ವಿರೋಧ ವ್ಯಕ್ತ ಪಡಿಸಿದ್ದು ಮತ್ತು ಸರ್ಕಾರ ಆ ಪ್ರಕ್ರೀಯೆಯನ್ನು ಹಿಂದೆ ಪಡೆದುಕೋಂಡ ವಿಚಾರವಾಗಿ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಫಲವತ್ತಾದ ಭೂಮಿ ಇರುವ ಕಾರಣ ರೈತರು ವಿರೋಧ ಮಾಡಿದ್ದಾರೆ ಎಂದರು.

ಎಲ್ಲಿ ಫಲವತ್ತಾದ ಭೂಮಿ ಇರುತ್ತದೆ, ಅದನ್ನು ತೆಗೆದುಕೊಳ್ಳದೆ ಬಂಜರು ಭೂಮಿ ತಗೊಂಡು ಕೈಗಾರಿಕಾ ಕಾರಿಡಾರ್ ಮಾಡಬೇಕು ಅಂತ ನಿರ್ಧಾರ ಮಾಡಿದ್ದೇವೆ. ಕಂದಾಯ ಇಲಾಖೆಯ ಭೂಮಿ ಇದ್ದರೆ ಇಲ್ಲವೆ ಫಲವತ್ತಾಗಿ ಅಲ್ಲದೆ ಜಮೀನನ್ನು ಗುರುತಿಸಿ ಆ ಪ್ರದೇಶದಲ್ಲಿ ಕಾರಿಡಾರ ನಿರ್ಮಾಣ ಮಾಡಲು ಉದ್ದೇಶಿಸಲಾಗಿದೆ.

ಬ್ಯಾಡಗಿ ಇಂಡಸ್ಟ್ರಿಯಲ್ ಕಾರಿಡಾರ್ ನಿರ್ಮಾಣಕ್ಕೆ ಭೂ ಸ್ವಾಧೀನ ಪ್ರಕ್ರಿಯೆ ಆದೇಶ ಹಿಂಪಡೆದಿದ್ದೇವೆ. ಹಾವೇರಿ ಜಿಲ್ಲೆಯಲ್ಲಿ ಬೇರೆ ಕಡೆಯಲ್ಲಿ ಕಾರಿಡಾರ್ ಮಾಡಬೇಕು ಎಂಬುದರ ಬಗ್ಗೆ ಜಮೀನು ಹುಡುಕಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.
ಈ ಸಂದರ್ಭದಲ್ಲಿ ಶಾಸಕ ನೆಹರು ಓಲೇಕಾರ ಇತರರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!