Budget Highlights | 2025-26ನೇ ಸಾಲಿನ ಕರ್ನಾಟಕ ಬಜೆಟ್ ಮಂಡನೆಯ ಕಂಪ್ಲೀಟ್ ಹೈಲೈಟ್ಸ್ ಇಲ್ಲಿದೆ ನೋಡಿ..

ಹೊಸದಿಗಂತ ಡಿಜಿಟಲ್ ಡೆಸ್ಕ್:

2025-26ನೇ ಸಾಲಿನ ಬಜೆಟ್​ ಅನ್ನು ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ್ದಾರೆ. ಈ ಬಾರಿಯ ಬಜೆಟ್​ನಲ್ಲಿ ರಾಜ್ಯದ ಜನತೆಗೆ ಸಾಕಷ್ಟು ಸಿಹಿ ಸುದ್ದಿ ನೀಡಿದ್ದಾರೆ. ಗ್ಯಾರೆಂಟಿ ಹೊರತಾಗಿಯೂ ಬಜೆಜ್​ನಲ್ಲಿ ಹಲವು ಘೋಷಣೆಗಳನ್ನು ಮಾಡಿದ್ದಾರೆ. ಇದೀಗ ಬಜೆಟ್​ನ ಕಂಪ್ಲೀಟ್ ಹೈಲೈಟ್ಸ್ ಇಲ್ಲಿದೆ ನೋಡಿ..

ಶಾಲಾ ಮಕ್ಕಳಿಗೆ ಮೊಟ್ಟೆ ವಿತರಣೆಯನ್ನು 6 ದಿನಕ್ಕೆ ವಿಸ್ತರಣೆ. ವಾರದಲ್ಲಿ 6 ದಿನ ಮೊಟ್ಟೆ, ಬಾಳೆಹಣ್ಣು ನೀಡಲು 1,500 ಕೋಟಿ ರೂ. ಮೀಸಲು.

ಧಾರ್ಮಿಕ ದತ್ತಿ ಇಲಾಖೆ ಅರ್ಚಕರಿಗೆ ತಸ್ತೀಕ್ ಮೊತ್ತದ ಏರಿಕೆ. 60 ಸಾವಿರ ರೂ.ನಿಂದ 72 ಸಾವಿರಕ್ಕೆ ತಸ್ತೀಕ್ ಮೊತ್ತ ಏರಿಕೆ. ಕರ್ನಾಟಕ ದೇವಾಲಯ ವಸತಿ ಕೋಶ ಸ್ಥಾಪನೆಗೆ ನಿರ್ಧಾರ. ದೇವಾಲಯಗಳ ಛತ್ರಗಳಲ್ಲಿ ರೂಮ್​ ಬುಕಿಂಗ್​ಗೆ ವ್ಯವಸ್ಥೆ.

ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ವಿಶೇಷ ಕಾರ್ಯಕ್ರಮದಡಿ 5 ಸಾವಿರ ಕೋಟಿ ರೂ. ಅನುದಾನ.

ಬೆಂಗಳೂರು ನಗರ ವಿಶ್ವವಿದ್ಯಾಲಯಕ್ಕೆ ಡಾ.ಮನಮೋಹನ್​​​ ಸಿಂಗ್ ವಿಶ್ವವಿದ್ಯಾಲಯ ಎಂದು ಮರುನಾಮಕರಣ.

ಪ್ರವರ್ಗ 1, 2ಎ, 2ಬಿ (ಮುಸ್ಲಿಂ) ಸಮುದಾಯದವರಿಗೆ 2 ಕೋಟಿ ರೂ.ವರೆಗೆ ಕಾಮಗಾರಿ ಗುತ್ತಿಗೆಯಲ್ಲಿ ಮೀಸಲಾತಿ . ಕೈಗಾರಿಕ ಪ್ರದೇಶ ಭೂಮಿ ಹಂಚಿಕೆಯಲ್ಲೂ ಪ್ರವರ್ಗ 1 2ಎ ಜತೆ 2ಬಿ (ಮುಸ್ಲಿಂ) ಗೆ ಶೇಕಡಾ 20ರಷ್ಟು ಮೀಸಲಾತಿ.

ರಾಜ್ಯದಲ್ಲಿ ಜಲಸಾರಿಗೆ ಕ್ಷೇತ್ರದಲ್ಲಿ ಹೊಸ ಯೋಜನೆಗಳ ಘೋಷಣೆ. ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಕ್ರೂಸ್​, ವಾಟರ್​​ ಮೆಟ್ರೋ ಮತ್ತು ಕೋಸ್ಟಲ್​ ಬರ್ತ್​​ ನಿರ್ಮಾಣಕ್ಕೆ ರಾಜ್ಯ ಸರ್ಕಾರ ನಿರ್ಧಾರ. ಉತ್ತರ ಕನ್ನಡ ಜಿಲ್ಲೆ ಮಂಕಿ ಗ್ರಾಮದಲ್ಲಿ ಬಂದರು ನಿರ್ಮಾಣ. ಮಂಗಳೂರಿನಲ್ಲಿ ಜಲಸಾರಿಗೆ ಸಂಗ್ರಹಾಲಯ ಅನುಭವನ ಕೇಂದ್ರ ಸ್ಥಾಪನೆ.

ರೇಷ್ಮೆ ಕ್ಷೇತ್ರಕ್ಕೆ ಹಲವು ಯೋಜನೆಗಳನ್ನು ನೀಡಿಲು ಸರ್ಕಾರ ನಿರ್ಧಾರ. ರೇಷ್ಮೆ ಅಭಿವೃದ್ಧಿ ಯೋಜನೆಗೆ 55 ಕೋಟಿ ರೂ. ಅನುದಾನ. ಮಧ್ಯಮವರ್ಗದ ರೇಷ್ಮೆ ನೂಲು ಬಿಚ್ಚಾಣಿಕೆದಾರರಿಗೆ, 120 ಕೊನೆಗಳ ಸ್ವಯಂಚಾಲಿತ ರೀಲಿಂಗ್‌ ಘಟಕಗಳ ಸ್ಥಾಪನೆಗೆ ಪ್ರೋತ್ಸಾಹ. ರಾಮನಗರ, ಶಿಡ್ಲಘಟ್ಟ ಹೈಟೆಕ್‌ ರೇಷ್ಮೆಗೂಡಿನ ಮಾರುಕಟ್ಟೆಯ ಎರಡನೇ ಹಂತದ ಕಾಮಗಾರಿ ಅನುಷ್ಠಾನಕ್ಕೆ 250 ಕೋಟಿ ರೂ. ಮೀಸಲು.

ಹಿಂದುಳಿದ ವರ್ಗಗಳ ವಿದ್ಯಾರ್ಥಿನಿಲಯಗಳ ಮೂಲಸೌಕರ್ಯಕ್ಕೆ 50 ಕೋಟಿ ರೂ. ಮೀಸಲು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ 30 ಮೆಟ್ರಿಕ್-ನಂತರದ ವಿದ್ಯಾರ್ಥಿ ನಿಲಯಗಳ ಕಟ್ಟಡ ನಿರ್ಮಾಣಕ್ಕೆ ಕ್ರಮ. ಅತ್ಯಂತ ಹಿಂದುಳಿದ 46 ಅಲೆಮಾರಿ ಅರೆಅಲೆಮಾರಿ ಜನಾಂಗದ ವಿದ್ಯಾರ್ಥಿಗಳಿಗಾಗಿ ನಾಲ್ಕು ಕಂದಾಯ ವಿಭಾಗಗಳಲ್ಲಿ ತಲಾ ಒಂದರಂತೆ ಡಿ.ದೇವರಾಜ ಅರಸು ವಸತಿ ಶಾಲೆಗಳ ಪ್ರಾರಂಭ.

ಇಂಜಿನಿಯರಿಂಗ್‌ ಮತ್ತು ಮೆಡಿಕಲ್‌ ಕಾಲೇಜುಗಳ ವಿದ್ಯಾರ್ಥಿಗಳಿಗೆ 62 ಹೊಸ ಮೆಟ್ರಿಕ್‌ ನಂತರದ ವಸತಿನಿಲಯಗಳನ್ನು ಪ್ರಾರಂಭಿಸಲು 15 ಕೋಟಿ ರೂ. ಮೀಸಲು. ವಿದ್ಯಾರ್ಥಿನಿಲಯಗಳ ಕಟ್ಟಡಗಳ ರಿಪೇರಿ/ದುರಸ್ತಿ ಮಾಡಲು 25 ಕೋಟಿ ರೂ. ಅನುದಾನ.

ಬೆಂಗಳೂರು ನಗರದಲ್ಲಿ ಹೊಸದಾಗಿ 9,000 ​ ಚಾಲಿತ ಬಸ್​ಗಳನ್ನು ರಸ್ತೆಗೆ ಇಳಿಸಲಾಗುವುದು. ​ಪಿಎಂ ಇ-ಡ್ರೈವ್​ ಯೋಜನೆಯಡಿ 14,750 ಹೊಸ ಬಸ್​ ಖರೀದಿಗೆ ನಿರ್ಧಾರ. 14,750 ಬಸ್​ಗಳ ಪೈಕಿ 9 ಸಾವಿರ ಬಸ್​ ಬಿಎಂಟಿಸಿಗೆ ಸೇರ್ಪಡೆ.

ಇ-ಜಮಾಬಂದಿ ತಂತ್ರಾಂಶ ಅಭಿವೃದ್ಧಿಪಡಿಸಿ ಪ್ರಸ್ತುತ ಸಾಲಿನಿಂದ ಜಾರಿ. ಜಮೀನುಗಳ ಪಹಣಿಗಳನ್ನು ವಾರಸುದಾರರಿಗೆ ಖಾತೆ ಮಾಡಲು ಇ-ಪೌತಿ ಆಂದೋಲನ ಆರಂಭ. ಹೊಸದಾಗಿ ರಚನೆಯಾದ ತಾಲ್ಲೂಕುಗಳ ಪೈಕಿ 21 ತಾಲ್ಲೂಕುಗಳಲ್ಲಿ ಪ್ರಜಾಸೌಧ ನಿರ್ಮಾಣಕ್ಕೆ ಕ್ರಮ.

ಪ್ರಾಜೆಕ್ಟ್ ಮೆಜೆಸ್ಟಿಕ್ ಯೋಜನೆ ನಿಲ್ದಾಣ ಉನ್ನತೀಕರಣಯಡಿ ಖಾಸಗಿ ಸಹಭಾಗಿತ್ವದಲ್ಲಿ ಮೆಜೆಸ್ಟಿಕ್ ಬಸ್ ನಿಲ್ದಾಣ ಉನ್ನತೀಕರಣ. ಬೆಂಗಳೂರು ಸೇಫ್ ಸಿಟಿ ಯೋಜನೆಯಡಿ ಖಾಸಗಿ ಸಹಭಾಗಿತ್ವದಲ್ಲಿ ಮೆಜೆಸ್ಟಿಕ್‌ ಬಸ್ ನಿಲ್ದಾಣದಲ್ಲಿ ವಾಣಿಜ್ಯ ಸಂಕೀರ್ಣದೊಂದಿಗೆ ಸಾರಿಗೆ ಹಬ್ ನಿರ್ಮಾಣ.

ರಾಜ್ಯದ ಆಯ್ದ 10 ಜಿಲ್ಲೆಗಳ ಪ್ರವಾಸಿ ತಾಣಗಳ ಅಭಿವೃದ್ಧಿಗೆ 50 ಕೋಟಿ ರೂ. ಅನುದಾನ. ಪ್ರವಾಸಿ ಮಿತ್ರರ ಸಂಖ್ಯೆ 1,000 ಕ್ಕೆ ಹೆಚ್ಚಳ ಹಾಗೂ 24X7 ಪ್ರವಾಸಿ ಸಹಾಯವಾಣಿ ತೆರೆಯಲು ಕ್ರಮ. ರಾಜ್ಯದ ಪ್ರವಾಸಿ ತಾಣಗಳ ಸಮಗ್ರ ಮಾಹಿತಿ ಸಂಗ್ರಹಿಸಲು ONE- TAC Digital Grid ಬಳಕೆ.

ಐತಿಹಾಸಿಕ ಲಕ್ಕುಂಡಿಯಲ್ಲಿನ ಪಾರಂಪರಿಕ ದೇವಾಲಯಗಳನ್ನು ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರ್ಪಡೆಗೆ ಕ್ರಮ. ಮೈಸೂರು ನಗರದ ಹಳೆ ಜಿಲ್ಲಾಧಿಕಾರಿಗಳ ಕಛೇರಿ ಕಟ್ಟಡವನ್ನು ರಾಜ್ಯ ಮಟ್ಟದ ವಸ್ತುಸಂಗ್ರಹಾಲಯವಾಗಿ ಪರಿವರ್ತನೆ.

ಪತ್ರಕರ್ತರ ಮಾಸಾಶನ 15 ಸಾವಿರ ರೂ.ಗೆ ಹಾಗೂ ಕುಟುಂಬ ಮಾಸಾಶನ 7,500 ರೂ.ಗೆ ಹೆಚ್ಚಳ. ಮಾನ್ಯತೆ ಹೊಂದಿರುವ ಪತ್ರಕರ್ತರು ಹಾಗೂ ಅವಲಂಬಿತ ಕುಟುಂಬ ಸದಸ್ಯರಿಗೆ 5 ಲಕ್ಷ ರೂ.ವರೆಗೆ ನಗದು ರಹಿತ ಚಿಕಿತ್ಸೆಗಾಗಿ ಮುಖ್ಯಮಂತ್ರಿಗಳ ಮಾಧ್ಯಮ ಸಂಜೀವಿನಿ ಯೋಜನೆ ಅನುಷ್ಠಾನ.

ಕನ್ನಡ ಚಲನಚಿತ್ರಗಳ ಪ್ರೋತ್ಸಾಹಕ್ಕಾಗಿ ಒಟಿಟಿ ವೇದಿಕೆ ಸೃಜಿಸಲು ಕ್ರಮ. ಮುಂದಿನ 3 ವರ್ಷಗಳ ಅವಧಿಯಲ್ಲಿ ಮೈಸೂರಿನಲ್ಲಿ ಚಿತ್ರನಗರಿ ಸ್ಥಾಪನೆ. ಎಲ್ಲಾ ವಿಧದ ಚಿತ್ರಮಂದಿರಗಳಲ್ಲಿ ಟಿಕೆಟ್‌ ದರ 200 ರೂ.ಗೆ ಮಿತಿಗೊಳಿಸಲು ಕ್ರಮ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!