ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶದ ನಿಜವಾದ ಬಿಕ್ಕಟ್ಟುಗಳನ್ನು ಬಜೆಟ್‌ನಲ್ಲಿ ನಿರ್ಲಕ್ಷಿಸಲಾಗಿದೆ ಎಂದು ರಾಹುಲ್ ಗಾಂಧಿ ಟೀಕಿಸಿದ್ದಾರೆ.
ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಬಜೆಟ್‌ನಲ್ಲಿ ಭಾರತದ ನಿಜವಾದ ಬಿಕ್ಕಟ್ಟುಗಳ ಬಗ್ಗೆ ಗಮನಹರಿಸಿಲ್ಲ. ಯುವಕರಿಗೆ ಉದ್ಯೋಗವಿಲ್ಲ, ಉತ್ಪಾದನೆ ಕುಸಿಯುತ್ತಿದೆ, ರೈತರು ಸಂಕಷ್ಟದಲ್ಲಿದ್ದಾರೆ. ಉಳಿತಾಯ ಕುಸಿಯುತ್ತಿದೆ, ಜಾಗತಿಕ ಆಘಾತಗಳು ಎದುರಾಗುತ್ತಿವೆ. ಹೂಡಿಕೆದಾರರು ಬಂಡವಾಳವನ್ನು ಹಿಂತೆಗೆದುಕೊಳ್ಳುತ್ತಿದ್ದಾರೆ. ಈ ಎಲ್ಲಾ ವಿಚಾರಗಳನ್ನು ನಿರ್ಲಕ್ಷಿಸಲಾಗಿದೆ ಎಂದು ಅವರು ಬರೆದುಕೊಂಡಿದ್ದಾರೆ.



