ಬಜೆಟ್ ‘ಸೀಡ್‌ಲೆಸ್ ಕಡಲೆಕಾಯಿ’ ಇದ್ದಂತಿದೆ: ರಾಜ್ಯ ಕಾಂಗ್ರೆಸ್ ಕಿಡಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೇಂದ್ರ ಸರಕಾರದ ಬಜೆಟ್ ‘ಸೀಡ್‌ಲೆಸ್ ಕಡಲೆಕಾಯಿ’ ಇದ್ದಂತಿದೆ. ’20 ಲಕ್ಷ ಕೋಟಿ ಪ್ಯಾಕೇಜ್’ ಎಂಬ ಬಿಳಿ ಕಾಗೆ ತೋರಿಸಿದಂತೆಯೇ ಎಂದು ರಾಜ್ಯ ಕಾಂಗ್ರೆಸ್ ಕಿಡಿಕಾರಿದೆ.

ಬಜೆಟ್ ಬಗ್ಗೆ ವಾಗ್ದಾಳಿ ನಡೆಸಿರುವ ಕಾಂಗ್ರೆಸ್, ಉದ್ಯೋಗಕ್ಕಾಗಿ ಪರಿತಪ್ಪಿಸುತ್ತಿರುವ ಯುವ ಸಮುದಾಯಕ್ಕೆ ಯಾವುದೇ ಭರವಸೆ ಇಲ್ಲ.ಬೆಲೆ ಏರಿಕೆ ನಿಯಂತ್ರಣಕ್ಕೆ ಕ್ರಮವಿಲ್ಲ. ಜನರ ಸಂಕಷ್ಟ ಕಡಿಮೆಯಾಗಬಹುದೆಂಬ ನಿರೀಕ್ಷೆಯನ್ನು ಕೇಂದ್ರ ಸರ್ಕಾರ ಹುಸಿ ಮಾಡಿದೆ ಎಂದು ಸರಣಿ ಟ್ವೀಟ್ ಮೂಲಕ ಗುಡುಗಿದೆ.

23 ಸಾವಿರ ಕೋಟಿ ಅಗತ್ಯವಿರುವ ಭದ್ರಾ ಮೇಲ್ದಂಡೆ ಯೋಜನೆಗೆ ಕೇವಲ 5,300 ಕೋಟಿ ನೀಡಿ ಮೂಗಿಗೆ ತುಪ್ಪ ಸವರಿದ್ದೇಕೆ? ಮೇಕೆದಾಟು, ಮಹದಾಯಿ ಯೋಜನೆಗಳ ಬಗ್ಗೆ ಚಕಾರ ಎತ್ತದಿರುವುದೇಕೆ? ಡಬಲ್ ಇಂಜಿನ್ ಸರ್ಕಾರ ಎಂದುಕೊಳ್ಳುವ ರಾಜ್ಯ ಬಿಜೆಪಿ ಸರ್ಕಾರ ಉತ್ತರಿಸಬೇಕು ಎಂದು ಆಗ್ರಹಿಸಿದೆ.

ಸಬ್ ಅರ್ಬನ್ ರೈಲು ಕಾಮಗಾರಿಗೆ ನಿಗದಿಪಡಿಸಿದ್ದ ಕಾಲಮಿತಿ ಮುಗಿಯುತ್ತಿದೆ. 18 ಸಾವಿರ ಕೋಟಿಯ ಯೋಜನೆಗೆ ಆನೆ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ ಎಂಬಂತೆ ಹಣ ನೀಡಿದ್ದು ಕರ್ನಾಟಕದೆಡೆಗೆ ಕೇಂದ್ರ ಸರ್ಕಾರಕ್ಕಿರುವ ತಾತ್ಸಾರ ಮನೋಭಾವಕ್ಕೆ ನಿದರ್ಶನ. ನಿಗದಿತ ಕಾಲಮಿತಿಯಲ್ಲಿ ಖಂಡಿತವಾಗಿಯೂ ಪೂರ್ಣಗೊಳಿಸುವ ಇರಾದೆ ಬಿಜೆಪಿಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!