ಹೊಸದಿಗಂತ ಡಿಜಿಟಲ್ ಡೆಸ್ಕ್:
ಧಾರ್ಮಿಕ ದತ್ತಿ ಇಲಾಖೆ ಅರ್ಚಕರಿಗೆ ತಸ್ತೀಕ್ ಮೊತ್ತದ ಏರಿಕೆ ಮಾಡಲಾಗಿದೆ. 60 ಸಾವಿರ ರೂ.ನಿಂದ 72 ಸಾವಿರಕ್ಕೆ ತಸ್ತೀಕ್ ಮೊತ್ತ ಏರಿಸಲಾಗುವುದು ಎಂದು ಸರ್ಕಾರ ಘೋಷಿಸಿದೆ.
ರಾಜ್ಯದಲ್ಲಿ ಒತ್ತುವರಿಯಾಗಿರುವ ದೇಗುಲಗಳ ಆಸ್ತಿ ರಕ್ಷಿಸಲು, ಭೂವರಾಹ ಯೋಜನೆಯಡಿ ಸ್ಥಿರಾಸ್ತಿ ದಾಖಲೀಕರಣಗೊಳಿಸಲು ಕ್ರಮವಹಿಸಲಾಗುವುದು. ಪ್ರವಾಸೋದ್ಯೋಮ ತಾಣವಾಗಿ ಚಂದ್ರಗುತ್ತಿ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.