ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು ಬಜೆಟ್ ಅಧಿವೇಶನ ಆರಂಭವಾಗುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ಮತ್ತು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಸಂಸತ್ತಿಗೆ ಆಗಮಿಸಿದ್ದಾರೆ. ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವು ಕೇಂದ್ರ ಸಚಿವರು ಆಗಮಿಸಿದ್ದಾರೆ
ಸಂಸತ್ತಿನ ಬಜೆಟ್ ಅಧಿವೇಶನವು ಇಂದು 11 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಉಭಯ ಸದನಗಳ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡುವುದರೊಂದಿಗೆ ಪ್ರಾರಂಭವಾಗುತ್ತದೆ.
ಇದರ ಬೆನ್ನಲ್ಲೇ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕೇಂದ್ರ ಬಜೆಟ್ ಮಂಡನೆಗೂ ಮುನ್ನ ಆರ್ಥಿಕ ಸಮೀಕ್ಷೆಯನ್ನು ಮಂಡಿಸಲಿದ್ದಾರೆ. ಲೋಕಸಭೆಯಲ್ಲಿ ಮಧ್ಯಾಹ್ನ 12 ಗಂಟೆಗೆ ಮತ್ತು 2 ಗಂಟೆಗೆ ರಾಜ್ಯಸಭೆಯಲ್ಲಿ ಮಂಡನೆಯಾಗಲಿದೆ.
ಹಣಕಾಸು ಸಚಿವಾಲಯದ ಆರ್ಥಿಕ ವ್ಯವಹಾರಗಳ ಇಲಾಖೆಯ ಆರ್ಥಿಕ ವಿಭಾಗವು ಸಿದ್ಧಪಡಿಸಿದ ಮತ್ತು ಮುಖ್ಯ ಆರ್ಥಿಕ ಸಲಹೆಗಾರರ ಮೇಲ್ವಿಚಾರಣೆಯಲ್ಲಿ ರೂಪಿಸಲಾದ ಆರ್ಥಿಕ ಸಮೀಕ್ಷೆಯ ದಾಖಲೆಯು ಆರ್ಥಿಕತೆಯ ಸ್ಥಿತಿ ಮತ್ತು 2024-25ರ ವಿವಿಧ ಸೂಚಕಗಳ ಒಳನೋಟಗಳನ್ನು ನೀಡುತ್ತದೆ.