Monday, August 8, 2022

Latest Posts

ನಾಳೆಯಿಂದ ಬಜೆಟ್ ಅಧಿವೇಶನ: ‘ಒಂದು ರಾಷ್ಟ್ರ- ಒಂದು ಚುನಾವಣೆ’ ಕುರಿತು 2 ದಿನ ಚರ್ಚೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಮಾರ್ಚ್‌ 4 ರಿಂದ 19 ದಿನಗಳ ಕಾಲ ರಾಜ್ಯ ವಿಧಾನಮಂಡಲ ಅಧಿವೇಶನ ನಡೆಯಲಿದ್ದು,  ಮೊದಲ ಎರಡು ದಿನ ‘ಒಂದು ರಾಷ್ಟ್ರ- ಒಂದು ಚುನಾವಣೆ’ ಕುರಿತು ಚರ್ಚೆ ನಡೆಯಲಿದೆ. ಮಾರ್ಚ್ 8 ರಂದು ರಾಜ್ಯ ಬಜೆಟ್ ಮಂಡನೆ ಆಗಲಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಮಾರ್ಚ್ 4 ರಿಂದ ಎರಡು ದಿನಗಳ ಕಾಲ ಕರ್ನಾಟಕ ವಿಧಾನಸಭೆ ಮತ್ತು ವಿಧಾನ ಪರಿಷತ್ತು ‘ಒಂದು ರಾಷ್ಟ್ರ, ಒಂದು ಚುನಾವಣೆ’ ಕುರಿತು ಚರ್ಚೆ ನಡೆಯಲಿದೆ. ಚರ್ಚೆಯ ನಂತರ ಎರಡೂ ಸದನಗಳ ಅಭಿಪ್ರಾಯಗಳನ್ನು ರಾಷ್ಟ್ರ ರಾಜಧಾನಿ ನವದೆಹಲಿಗೆ ರವಾನಿಸಲಾಗುವುದು ಎಂದರು.

‘ಒಂದು ರಾಷ್ಟ್ರ, ಒಂದು ಚುನಾವಣೆ’ ಬಗ್ಗೆ ಸದನದಲ್ಲಿ ಚರ್ಚೆ ನಡೆಸುತ್ತಿರುವ ಮೊದಲ ರಾಜ್ಯ ಕರ್ನಾಟಕವಾಗಿದೆ. ನಾವು ಯಾವುದೇ ನೀತಿ, ನಿರ್ಣಯವನ್ನು  ರೂಪಿಸಲು ಸಾಧ್ಯವಿಲ್ಲ. ಆದರೆ ನಮ್ಮ  ಅಭಿಪ್ರಾಯವನ್ನು ಪ್ರಧಾನಿ, ರಾಷ್ಟ್ರಪತಿ ಮತ್ತು ಭಾರತದ ಮುಖ್ಯ ಚುನಾವಣಾ ಆಯೋಗಕ್ಕೆ ಕಳುಹಿಸಬಹುದು ಕಾಗೇರಿ ಹೇಳಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss