ಹೊಸದಿಗಂತ ಡಿಜಿಟಲ್ ಡೆಸ್ಕ್:
‘ಕೃಷಿ ಅರಣ್ಯ ಮತ್ತು ಕಾರ್ಬನ್ ಕ್ರೆಡಿಟ್’ ನೀತಿ ಜಾರಿಗೆ ಸರ್ಕಾರ ನಿರ್ಧಾರ ಕೈಗೊಳ್ಳಲಾಗಿದೆ. ಅರಣ್ಯ ಪ್ರದೇಶದಲ್ಲಿ 28,494 ಹೆಕ್ಟೇರ್‌ನಲ್ಲಿ 213 ಲಕ್ಷ ಸಸಿಗಳನ್ನು ನೆಡಲಾಗುವುದು. ಅರಣ್ಯೇತರ ಪ್ರದೇಶದಲ್ಲಿ 3.50 ಲಕ್ಷ ಸಸಿಗಳನ್ನು ಬೆಳೆಸಿ ನಿರ್ವಹಣೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಸಿಎಂ ತಿಳಿಸಿದ್ದಾರೆ.
ಕಾಡಾನೆ ಹಾಗೂ ಚಿರತೆ ಹಾವಳಿ ನಿಯಂತ್ರಿಸಲು ಕಾರ್ಯಪಡೆ ರಚನೆ ಮಾಡಲಾಗುವುದು. ಕಾರ್ಯಪಡೆಗಳ ಕಾರ್ಯನಿರ್ವಹಣೆಗೆ 17 ಕೋಟಿ ರೂ. ಅನುದಾನ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.