Friday, March 24, 2023

Latest Posts

ಆತ್ಮನಿರ್ಭರ ಯೋಜನೆಯ ಕನಸನ್ನು ನನಸು ಮಾಡುವ ಬಜೆಟ್: ಸಿ.ಟಿ.ರವಿ

ಹೊಸದಿಗಂತ ವರದಿ, ಚಿಕ್ಕಮಗಳೂರು:

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಮಂಡಿಸಿದ ಬಜೆಟ್ ಸರ್ವ ಸ್ಪರ್ಶಿ ಸರ್ವ ವ್ಯಾಪಿಯಾಗಿದ್ದು, ವಿರೋಧಿಗಳಿಗೆ ಟೀಕೆ ಮಾಡಲು ಏನೂ ಸಿಗದೆ ಹುಡುಕಾಡುವಂತಾಗಿದೆ ಎಂದು ಶಾಸಕರೂ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ.
ದೂರದೃಷ್ಟಿಯ ಯೋಜನೆಗಳು, ಕಟ್ಟಡ ಕಾರ್ಮಿಕರು ರೈತರು, ಮಹಿಳೆಯರು ಸೇರಿದಂತೆ ವಿವಿಧ ವರ್ಗಗಳನ್ನು ಪ್ರತಿನಿಧಿಸಿದ್ದಾರೆ. ವಿರೋಧಿಗಳು ಮೊಸರಲ್ಲಿ ಕಲ್ಲು ಹುಡುಕುವ ಪ್ರಯತ್ನ ಮಾಡಬೇಕು ಅಷ್ಟೇ ಎಂದಿದ್ದಾರೆ.
ಮೇಕೆದಾಟಿಗೆ ೧ ಸಾವಿರ ಕೋಟಿ ರೂ. ಇಡಲಾಗಿದೆ. ಎತ್ತಿನ ಹೊಳೆ ಯೋಜನೆ ಮೊದಲ ಹಂತ ಪೂರೈಸಿ ಎರಡನೇ ಹಂತಕ್ಕೆ ಅನುದಾನ ನೀಡಿದ್ದೇವೆ. ಪ್ರಧಾನಿ ನರೇಂದ್ರ ಮೋದಿ ಅವರ ಆತ್ಮನಿರ್ಭರ ಯೋಜನೆಯ ಕನಸನ್ನು ನನಸು ಮಾಡುವ ಬಜೆಟ್ ಇದಾಗಿದೆ ಎಂದು ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!