Budget2023 | ಮೀನುಗಾರಿಕೆ ಮತ್ತು ಕುಶಲಕರ್ಮಿಗಳಿಗೆ ನೆರವು: 6 ಸಾವಿರ ಕೋಟಿ ರೂ. ಘೋಷಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಮೀನುಗಾರಿಕೆಯಲ್ಲಿ ತೊಡಗಿರುವವರನ್ನು ಮತ್ತಷ್ಟು ಸಕ್ರಿಯಗೊಳಿಸಲು ಸರ್ಕಾರವು ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ 6,000 ಕೋಟಿ ರೂಪಾಯಿಗಳ ಉಪಯೋಜನೆಯನ್ನು ಪ್ರಾರಂಭಿಸಲಿದೆ ಎಂದು ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಸಾಂಪ್ರದಾಯಿಕ ಕುಶಲಕರ್ಮಿಗಳಿಗೆ ಪ್ರಧಾನಮಂತ್ರಿ ವಿಶ್ವ ಕರ್ಮ ಕೌಶಲ್ ಸಮ್ಮಾನ್ ಎಂಬ ಹೆಸರಿನ ಯೋಜನೆಯನ್ನು ರಚಿಸಲಾಗಿದ್ದು ಇದು ಕುಶಲ ಕರ್ಮಿಗಳಿಗೆ ತಮ್ಮ ಉತ್ಪನ್ನಗಳ ಗುಣಮಟ್ಟ, ಪ್ರಮಾಣ ಮತ್ತು ತಲುಪುವಿಕೆಯನ್ನು ಸುಧಾರಿಸಲು ಅನುವು ಮಾಡಿಕೊಡುತ್ತದೆ ಎಂದು ವಿತ್ತ ಸಚಿವರು ಘೋಷಿಸಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!